ನವದೆಹಲಿ: ರಾಜ್ಯಸಭೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಕೃಷಿ ಕಾಯ್ದೆಯನ್ನು ಸಮರ್ಥಿಸಿಕೊಂಡಿದ್ದಾರೆ. ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಹಾಡಿ ಹೊಗಳಿದ್ದಾರೆ.
ಎಚ್.ಡಿ.ದೇವೇಗೌಡ ಅವರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ. ಸದನದಲ್ಲಿ ಕೃಷಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ದೇವೇಗೌಡ ಜೀ ಕೊಡುಗೆಯನ್ನು ನಾನು ಪ್ರಶಂಸಿಸುತ್ತೇನೆ. ಅವರ ಮಾತುಗಳು ಚರ್ಚೆಗೆ ಉತ್ತಮ ದೃಷ್ಟಿಕೋನವನ್ನು ನೀಡಿವೆ. ಅವರು ಸ್ವತಃ ಕೃಷಿ ಕ್ಷೇತ್ರದೊಂದಿಗೆ ಬಲವಾದ ಒಡನಾಟವನ್ನು ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ.
PublicNext
08/02/2021 06:08 pm