ರಾಯಚೂರು: ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯದರಲ್ಲೇ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಉಪಚುನಾವಣೆ ಹೊಸ್ತಿಲಲ್ಲೇ ಸಿಎಂ ಯಡಿಯೂರಪ್ಪ ಮಸ್ಕಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ಕೊಟ್ಟಿದ್ದಾರೆ.
ಜಿಲ್ಲೆಯ ಒಟ್ಟು 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುಮೋದನೆ ನೀಡಲಾಗಿದ್ದು, ಈ ಸಂಬಂಧ 457.18 ಕೋಟಿ ರೂಪಾಯಿ ಆಡಳಿತಾತ್ಮಕ ಮಂಜೂರಾತಿ ನೀಡಿದೆ. ಅದ್ರಂತೆ, ಮೊದಲ ಕಂತಾಗಿ 82.33 ಕೋಟಿ ರೂಪಾಯಿಯನ್ನ ಬಿಡುಗಡೆ ಮಾಡಲಾಗಿದ್ದು, ಯೋಜನೆ ಅನುಷ್ಠಾನಕ್ಕಾಗಿ ತಕ್ಷಣ ಟೆಂಡರ್ ಕರೆಯಲಾಗುತ್ತೆ ಎಂದು ಸರ್ಕಾರ ತಿಳಿಸಿದೆ.
PublicNext
09/02/2021 08:17 am