ನವದೆಹಲಿ: ಅಮೆರಿಕದ ನೂತನ ಅಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ಜೊ ಬೈಡನ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ.
ದ್ವಿಪಕ್ಷೀಯ ಕಾರ್ಯತಂತ್ರ ಸಹಭಾಗಿತ್ವ ವಿಚಾರದಲ್ಲಿ ಕ್ರೋಢೀಕರಿಸುವುದಲ್ಲದೆ, ಇಂಡೊ-ಫೆಸಿಫಿಕ್ ಪ್ರದೇಶ ಸೇರಿದಂತೆ ಅದರಿಂದಾಚೆಗೆ ಶಾಂತಿ ಮತ್ತು ಭದ್ರತೆಯನ್ನು ಕಾಪಾಡುವುದರ ಕುರಿತು ಒಲವು ತೋರಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಅಮೆರಿಕದ ನೂತನ ಅಧ್ಯಕ್ಷರಿಗೆ ಅಭಿನಂದನೆ ತಿಳಿಸುವ ಮೂಲಕ ಸ್ಥಳೀಯ ವಿಷಯಗಳು ಮತ್ತು ಹಂಚಿಕೆಯ ಆದ್ಯತೆ ವಿಷಯಗಳ ಕುರಿತು ಚರ್ಚೆ ನಡೆಸಿರುವುದಾಗಿ ಹೇಳಿದ್ದಾರೆ.
PublicNext
09/02/2021 08:57 am