ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್ : ವಿಧಾನ ಪರಿಷತ್ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ನ ನೂತನ ಸಭಾಪತಿಯಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾದರು. ಇಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ಕಣಕ್ಕೆ ಇಳಿದಿದ್ದರು. ಕಾಂಗ್ರೆಸ್ ನಿಂದ ನಜೀರ್ ಅಹ್ಮದ್ ಅಭ್ಯರ್ಥಿಯಾಗಿದ್ದರು.

ಆದರೆ ಗೋ ಹತ್ಯೆ ನಿಷೇಧ ವಿಧೇಯಕ ವಿಧಾನಪರಿಷತ್ ನಲ್ಲಿ ಅಂಗೀಕಾರ ವಿಚಾರವಾಗಿ ಕಾಂಗ್ರೆಸ್ ಇಂದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದೆ. ಸಭಾಪತಿ ಚುನಾವಣೆಗೆ ಪ್ರಸ್ತಾವನೆ ಸಲ್ಲಿಸುವಾಗ ಕಾಂಗ್ರೆಸ್ ನಿಂದ ಸಲ್ಲಿಕೆಯಾಗಿಲ್ಲ. ಹೀಗಾಗಿ ಬಸವರಾಜ್ ಹೊರಟ್ಟಿ ಅವರೇ ಮುಂದಿನ ಸಭಾಪತಿ ಎಂದು ಘೋಷಿಸಲಾಯಿತು.

Edited By : Nirmala Aralikatti
PublicNext

PublicNext

09/02/2021 12:35 pm

Cinque Terre

80.34 K

Cinque Terre

36

ಸಂಬಂಧಿತ ಸುದ್ದಿ