ದಾವಣಗೆರೆ: ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಇನ್ನೆರಡು ದಿನಗಳಲ್ಲಿ ದಿನಾಂಕ ನಿಗದಿ ಮಾಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ನಡೆಯುತ್ತಿರುವ ವಾಲ್ಮೀಕಿ ಜಾತ್ರೆಯ ವೇದಿಕೆಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಣಕಾಸಿನ ಇತಿಮಿತಿ ನೋಡಿಕೊಂಡು ಆಯವ್ಯಯ ಮಂಡನೆ ಮಾಡಲಾಗುವುದು ಎಂದು ಹೇಳಿದರು.
ಈಗಾಗಲೇ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚೆ ನಡೆಸಿದ್ದೇನೆ. ಕೊರೊನಾ ಬಂದ ಬಳಿಕ ಆರ್ಥಿಕ ಸಂಕಷ್ಟದ ಪರಿಸ್ಥಿತಿ ಪ್ರತಿಯೊಬ್ಬರಿಗೂ ಗೊತ್ತಿದೆ. ಕಳೆದ ಮೂರು ತಿಂಗಳಿನಿಂದ ರಾಜ್ಯದಲ್ಲಿ ತೆರಿಗೆ ಸಂಗ್ರಹ ಪರವಾಗಿಲ್ಲ ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.
ವಾಲ್ಮೀಕಿ ಸಮುದಾಯಕ್ಕೆ ಶೇ. 7.5ಕ್ಕೆ ಮೀಸಲಾತಿ ಹೆಚ್ಚಳ ಹಾಗೂ ಕುರುಬ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಹೆಚ್ಚಿನ ಪ್ರತಿಕ್ರಿಯೆ ನೀಡದ ಅವರು, ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಸಂಬಂಧ ವೇದಿಕೆಯಲ್ಲಿಯೇ ಮಾತನಾಡುತ್ತೇನೆ ಎಂದು ಹೇಳಿ ತೆರಳಿದರು.
PublicNext
09/02/2021 02:16 pm