ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿ ಹಿಟ್ಲರ್‌ಗಿಂತಲೂ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ಇದನ್ನು ಹೆಚ್ಚು ದಿನ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಎಐಸಿಸಿ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.
ಇಂಧನ ದರ ಏರಿಕೆ ಖಂಡಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕಾಂಗ್ರೆಸ್‌ನಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ''ಪ್ರಧಾನಿ ಮೋದಿ ದಬ್ಬಾಳಿಕೆಯ ಮೂಲಕ ದೇಶ ಆಳುತ್ತಿದ್ದಾರೆ. ವಿದೇಶದಲ್ಲಿ ಇಂಧನ ಬೆಲೆ ಕಡಿಮೆ ಆಗಿದ್ದರೂ ದುಡ್ಡು ಮಾಡಿಕೊಳ್ಳಲು ಕೇಂದ್ರ ಸರ್ಕಾರ ತೆರಿಗೆ ಹೆಚ್ಚಿಸಿದೆ. ಅಷ್ಟೇ ಅಲ್ಲದೆ ಆಹಾರ ಪದಾರ್ಥ ಸೇರಿದಂತೆ ಅನೇಕ ವಸ್ತುಗಳ ಬೆಲೆ ಹೆಚ್ಚು ಮಾಡುತ್ತಿದ್ದಾರೆ'' ಎಂದು ಅಸಮಾಧಾನ ಹೊರ ಹಾಕಿದರು.
PublicNext
09/02/2021 02:47 pm