ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂಸ್ಥಾನಿ ಮುಸ್ಲಿಂ ಆಗಿದ್ದಕ್ಕೆ ನನಗೆ ಹೆಮ್ಮೆ ಇದೆ: ಗುಲಾಂ ನಬಿ ಆಜಾದ್

ನವದೆಹಲಿ: ಪಾಕಿಸ್ತಾನದ ದುಃಸ್ಥಿತಿಯನ್ನು ನೋಡಿದರೆ, ಭಾರತೀಯ ಮುಸ್ಲಿಂ ಆಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸದಸ್ಯ, ಪ್ರತಿ ಪಕ್ಷ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.

ರಾಜ್ಯಸಭೆ ಸದಸ್ಯತ್ವದ ಕೊನೆಯ ದಿನವಾದ ಇಂದು ವಿದಾಯ ಭಾಷಣ ಮಾಡಿದ ಅವರು, ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಇದ್ದೇನೆ. ಪಾಕಿಸ್ತಾನದ ಸ್ಥಿತಿಗತಿ ಕುರಿತು ಓದಿದಾಗ ಹಿಂದೂಸ್ಥಾನಿ ಮುಸ್ಲಿಂ ಆಗಿರುವುದಕ್ಕೆ ನನಗೆ ತುಂಬಾ ಹೆಮ್ಮೆ ಇದೆ ಎಂದು ರಾಜ್ಯಸಭೆಯಲ್ಲಿ ತಮ್ಮ ಕೊನೆಯ ಭಾಷಣದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ ಗುಲಾಂ ನಬಿ ಆಜಾದ್, ಹಲವು ನೆನಪುಗಳನ್ನು ಮೆಲುಕು ಹಾಕಿದರು. ಹಲವಾರು ಸಂದರ್ಭಗಳಲ್ಲಿ ಪ್ರಧಾನಿ ಮೋದಿಯವರೊಂದಿಗೆ ಮಾತಿನ ಚಕಮಕಿ ನಡೆಸಿದ್ದೇನೆ. ಆದರೆ ಅವರು ನನ್ನ ಮಾತುಗಳನ್ನು ವೈಯಕ್ತಿಕವಾಗಿ ತೆಗೆದುಕೊಂಡಿಲ್ಲ. ಅಲ್ಲದೇ ನಾನು ಮೇಲ್ಮನೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದಾಗ ಏನಾದರೂ ಸಹಾಯ ಬೇಕಾ ಎಂದು ಕೇಳಿದ್ದರು ಎಂದು ಸ್ಮರಿಸಿಕೊಂಡರು.

Edited By : Nagaraj Tulugeri
PublicNext

PublicNext

09/02/2021 03:54 pm

Cinque Terre

87.33 K

Cinque Terre

18

ಸಂಬಂಧಿತ ಸುದ್ದಿ