ಹರಿಹರ: ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲೇ 'ನಾನು ಸತ್ತರೇ ಇಲ್ಲೇ ಸಾಯುತ್ತೇನೆ' ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೇಳಿದ ಘಟನೆ ಇಂದು ನಡೆಯಿತು. ಅದಕ್ಕೆ ನೀವು ಆ ನಿರ್ಧಾರ ಮಾಡಬೇಡಿ ಎಂದು ಸಿಎಂ ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು.
ತಾಲೂಕಿನ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಿದ್ದ ವೇಳೆ ಮಾತನಾಡಿದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ವಾಲ್ಮೀಕಿ ಸಮುದಾಯಕ್ಕೆ ಮೀಸಲು ಹೆಚ್ಚಿಸಲು ಮಾರ್ಚ್ 9ರ ಗಡುವು ನೀಡಿದರು. ಅದಲ್ಲದೇ ಬೇಡಿಕೆ ಈಡೇರಿಸದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಘೋಷಿಸಿದರು.
ಬಳಿಕ ಮಾತು ಮುಂದುವರೆಸಿದ ಶ್ರೀಗಳು ನಾನು ಸತ್ತರೇ ಇಲ್ಲೇ ಸಾಯುತ್ತೇನೆ ಎಂದು ಹೇಳಿದರು. ಆಗ ಬೇಸರಗೊಂಡ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ನೀವು ಆ ನಿರ್ಧಾರ ಮಾಡಬೇಡಿ ಎಂದು ಹೇಳಿದರು. ಆಗ ಸ್ವಾಮೀಜಿ ಕೂಡ ತಮ್ಮ ಮಾತಿಗೆ ವಿಷಾದ ವ್ಯಕ್ತಪಡಿಸಿದರು.
PublicNext
09/02/2021 05:17 pm