ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾವು ಯಾವುದೇ ಪಕ್ಷದಲ್ಲಿ ಇದ್ದರೂ ಸಿದ್ದರಾಮಯ್ಯ ನಮ್ಮ ನಾಯಕ: ಸೋಮಶೇಖರ್

ಮೈಸೂರು: ನಾವು ಯಾವುದೇ ಪಕ್ಷದಲ್ಲಿ ಇದ್ದರೂ ಸಿದ್ದರಾಮಯ್ಯ ಅವರು ನಮ್ಮ ನಾಯಕರು ಎಂದು ಸಚಿವ ಎಸ್​​ಟಿ ಸೋಮಶೇಖರ್ ಹೇಳಿದ್ದಾರೆ.

ಸುತ್ತೂರಿನಲ್ಲಿ ನಡೆದ ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಮ್ಮ ಹಳೆ ನಾಯಕರು. ಯಾವುದೇ ಪಕ್ಷದಲ್ಲಿ ಇರಲಿ ಅವರು ನಮ್ಮ ನಾಯಕರು. ಕಾಂಗ್ರೆಸ್ ಬಿಟ್ಟ ಮೇಲೆ ಅವರು ಜೊತೆ ಮೊದಲ ಬಾರಿ ವೇದಿಕೆ ಹಂಚಿಕೊಂಡಿದ್ದೇನೆ. ಬಹಳ ಸಂತೋಷದಿಂದ ಮಾತನಾಡಿಸಿದರು ಎಂದರು.

ಕಾರ್ಯಕ್ರಮದ ವೇದಿಕೆ ಮೇಲೂ ನಾನು ಮಾತನಾಡೋಲ್ಲ ನೀವೆ ಮಾತನಾಡಿ ಅಂತಾ ಅವರಿಗೆ ಹೇಳಿದೆ. ಅದಕ್ಕೆ ಬಹಳ ಕಿಲಾಡಿ ಇದ್ದೀಯಾ ನೀನು ಅಂತ ಹಾಸ್ಯ ಮಾಡಿದ್ರು. ಅವರು ಜಿಲ್ಲೆಯ ಒಂದೆರಡು ಕೆಲಸಗಳನ್ನು ಮಾಡಿಕೊಡುವಂತೆ ಹೇಳಿದ್ದಾರೆ. ಆ ಕೆಲಸಗಳನ್ನ ಪರಿಶೀಲನೆ ಮಾಡಿ ಅವರ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ದಾಗಿ ಸಚಿವರು ಹೇಳಿದರು.

ಮೈಸೂರಿನ ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ವಿವಾಹ ಸಮಾರಂಭದ ಉದ್ಘಾಟನೆಯಲ್ಲಿ ಮಠದ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮಿ, ವಿಜಯಪುರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

09/02/2021 07:15 pm

Cinque Terre

59.78 K

Cinque Terre

4

ಸಂಬಂಧಿತ ಸುದ್ದಿ