ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

''ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಹೊಸ ಕೃಷಿ ಕಾಯ್ದೆ ರದ್ದು''

ಲಕ್ನೋ: ದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಿದೆ ಎಂದು ಕಾಂಗ್ರೆಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಕಿಸಾನ್ ಪಂಚಾಯತ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ''ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ನಾಯಕರು ಅವಮಾನಿಸುತ್ತಿದ್ದಾರೆ. ಹೊಸದಾಗಿ ತಂದಿರುವ ಈ ಮೂರು ಕೃಷಿ ಕಾಯ್ದೆಗಳು ರಾಕ್ಷಸರೂಪಿಯಾಗಿದ್ದು, ರೈತ ವಿರೋಧಿಯಾಗಿವೆ. ಈ ಕಾಯ್ದೆಗಳನ್ನು ರದ್ದುಪಡಿಸುವವರೆಗೂ ಕಾಂಗ್ರೆಸ್‌ ಹೋರಾಟ ಮುಂದುವರಿಸಲಿದೆ'' ಎಂದರು.

ನೀವು ಕಾಂಗ್ರೆಸ್‌ಗೆ ಮತ ನೀಡಿ, ಅಧಿಕಾರ ನೀಡಿದರೆ ಈ ಕಾಯ್ದೆಗಳನ್ನು ನಾವು ಖಂಡಿತಾ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದರು.

Edited By : Vijay Kumar
PublicNext

PublicNext

10/02/2021 08:26 pm

Cinque Terre

80.33 K

Cinque Terre

24