ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಫೆ.18ರಂದು ದೇಶವ್ಯಾಪಿ ರೈಲು ತಡೆಗೆ ರೈತ ಸಂಘಟನೆಗಳ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರ ರೂಪಿಸಿದ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಿಗಿಗೊಲಿಸಲು ರೈತ ಸಂಘಟನೆಗಳು ಒಮ್ಮತದ ನಿರ್ಧಾರ ಕೈಗೊಂಡಿವೆ. ಇದರ ಭಾಗವಾಗಿ ಫೆಬ್ರುವರಿ 18ರಂದು ನಾಲ್ಕು ತಾಸುಗಳ ಕಾಲ ದೇಶವ್ಯಾಪಿ ರೈಲು ರೋಕೋ (ರೈಲು ತಡೆ) ಚಳವಳಿಯನ್ನು ನಡೆಸೋದಾಗಿ ರೈತ ಸಂಘಟನೆಗಳು ಹೇಳಿವೆ.

ಫೆ.18ರಂದು ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈಲು ತಡೆ ನಡೆಯಲಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಫೆಬ್ರುವರಿ 18ರಂದು ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ದೇಶಾದ್ಯಂತ ರೈಲ್ ರೋಕೋ (ರೈಲು ತಡೆ) ಚಳವಳಿ ಹಮ್ಮಿಕೊಳ್ಳಲಾಗುತ್ತಿದೆ. ಈ ಹೋರಾಟದಲ್ಲಿ ಸಾವಿರಾರು ರೈತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

Edited By : Nagaraj Tulugeri
PublicNext

PublicNext

11/02/2021 07:42 am

Cinque Terre

56.81 K

Cinque Terre

2

ಸಂಬಂಧಿತ ಸುದ್ದಿ