ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಮಸಾಲಿ ಹೋರಾಟದಲ್ಲಿ ಭುಗಿಲೆದ್ದ ಭಿನ್ನಮತ

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸ್ಥಾನಮಾನ ನೀಡಬೇಕೆಂಬ ಬೇಡಿಕೆ ಇಟ್ಟು ಸ್ವಾಮೀಜಿಗಳು ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಕೆಲವೊಂದು ನಿರ್ಣಾಯಕ ಸಂದರ್ಭದಲ್ಲಿ ಹೋರಾಟದಲ್ಲಿರುವ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಭಿನ್ನಮತ ಶುರುವಾಗಿದೆ ಎಂಬ ಮಾಹಿತಿ ಇದೆ.

ನಿನ್ನೆ ಫೆ. ೧೦ ರಂದು ತುಮಕೂರಿನಲ್ಲಿ ಸಭೆ ನಡೆಸಿ ಜಯಮೃತ್ಯುಂಜಯ ಸ್ವಾಮೀಜಿಗಳನ್ನು ಮನವೊಲಿಸಲು ಸಚಿವ ಮುರುಗೇಶ್ ನಿರಾಣಿ ತೆರಳಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಕೈ ಬಿಟ್ಟು ಕೇವಲ ಸಮಾವೇಶ ನಡೆಸಿ ಪಾದಯಾತ್ರೆ ಮುಗಿಸಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ವಿಜಯಾನಂದ ಕಾಶಪ್ಪನವರ್ ವಿರೋಧ ವ್ಯಕ್ತಪಡಿಸಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಿಯೇ ಸಿದ್ಧ ಎಂದು ಹೇಳಿದ್ದಾರೆ. ಹೀಗಾಗಿ ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ.

ಈ ವಿಚಾರವಾಗಿ ಸಭೆ ನಡೆದು ಪಾದಯಾತ್ರೆ ಬೆಂಗಳೂರು ತಲುಪಿದ ನಂತರ ಸಮಾವೇಶ ನಡೆಸೋದಾಗಿ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಮತ್ತಷ್ಟು ಅಸಮಾಧಾನಗೊಂಡ ವಿಜಯಾನಂದ ಕಾಶಪ್ಪನವರ್ ಸಭೆಯಿಂದ ಎದ್ದು ಹೊರ ನಡೆದಿದ್ದಾರೆ. ನಂತರ ಅಲ್ಲಿದ್ದ ಕೆಲವರು ಕಾಶಪ್ಪನವರ ಅವರನ್ನು ಮನವೊಲಿಸಿ ವಾಪಸ್ ಕರೆತಂದಿದ್ದಾರೆ ಎನ್ನಲಾಗಿದೆ.

Edited By : Nagaraj Tulugeri
PublicNext

PublicNext

11/02/2021 08:07 am

Cinque Terre

63.69 K

Cinque Terre

8