ಹುಬ್ಬಳ್ಳಿ: ಈಶ್ವರಪ್ಪರನ್ನ ಆರ್ಎಸ್ಎಸ್ ನವರು ಎತ್ತಿ ಕಟ್ಟಿ ಹೋರಾಟ ಮಾಡಿಸುತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿದ್ದ ವೇಳೆ ಏನೂ ಸಾಧನೆ ಮಾಡಿಲ್ಲ ಅಂತಾ ಸಚಿವ ಈಶ್ವರಪ್ಪ ಟೀಕೆ ವಿಚಾರದಲ್ಲಿ, ನಾನು ಸಿಎಂ ಆಗಿದ್ದಾಗ ಏನು ಅಭಿವೃದ್ಧಿ ಮಾಡಿದ್ದೇನೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. Who is ಈಶ್ವರಪ್ಪ ? ನನಗೆ ಈಶ್ವರಪ್ಪನ ಸರ್ಟಿಫಿಕೇಟ್ ಬೇಕಾಗಿಲ್ಲ. ನನಗೆ ಜನ ಸರ್ಟಿಫಿಕೇಟ್ ಕೊಡ್ತಾರೆ. ಐ ಡೋಂಟ್ ಕೇರ್ ಈಶ್ವರಪ್ಪ. ನನ್ನ ಸಾಧನೆ ಬಗ್ಗೆ ಈಶ್ವರಪ್ಪಗೆ ವರದಿ ಕೊಡುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡಲ್ಲ ಅನ್ನೋ ವಿಚಾರದಲ್ಲಿ, ಜೆಡಿಎಸ್ ಗೆ ಉತ್ತರ ಕರ್ನಾಟಕದಲ್ಲಿ ನೆಲೆ ಇಲ್ಲ. ಜೆಡಿಎಸ್ ನವರು ಬಿಜೆಪಿಗೆ ಸಹಾಯ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಕೊರೆತೆಯಿಲ್ಲ. ಚುನಾವಣೆ ಘೋಷಣೆಯಾದ ಕೂಡಲೇ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದರು. ಈ ಸಮಯದಲ್ಲಿ ಹಿಂದ್ ಸಮಾವೇಶ ಮಾಡಲ್ಲ, ಕಾಂಗ್ರೆಸ್ ಹಿಂದುಳಿದವರ ಪರವಾಗಿದೆ.
ಕುರುಬರಿಗೆ ಎಸ್ ಟಿ ಮೀಸಲು ನೀಡುವ ವಿಚಾರದಲ್ಲಿ, ಕುಲಶಾಸ್ತ್ರ ಅಧ್ಯಯನದ ವರದಿ ಬಂದಿಲ್ಲ, ವರದಿ ಬರುವ ಮುನ್ನವೇ ಹೋರಾಟ ಬೇಡ ಅಂದಿದ್ದೆ. ನಾನು ಸಿಎಂ ಆಗಿದ್ದ ವೇಳೆ ನಾಲ್ಕು ಜಿಲ್ಲೆಗಳಲ್ಲಿ ಕುರುಬರನ್ನು ಎಸ್ ಟಿಗೆ ಸೇರಿಸಬೇಕು ಅಂತಾ ಆದೇಶ ಮಾಡಿದ್ದೆ, ಎಸ್ ಟಿ ಮೀಸಲು ಹೋರಾಟದಲ್ಲಿ ರಾಜಕೀಯ ಮಾಡಲ್ಲ. ಇದು ಆರ್ ಎಸ್ ಎಸ್ ಪ್ರೇರಿತ ಹೋರಾಟ ಎಂದರು.
PublicNext
11/02/2021 11:43 am