ನವದೆಹಲಿ: ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ.
ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿಭಟನೆ ಕೇವಲ ರೈತರದ್ದಲ್ಲ, ಇಡೀ ದೇಶದ ಚಳುವಳಿ ಎಂದು ಹೇಳಿರುವ ರಾಹುಲ್ ಗಾಂಧಿ ಸರ್ಕಾರ ಕಾಯ್ದೆಗಳನ್ನು ಹಿಂಪಡೆಯಲೇಬೇಕಾಗುತ್ತದೆ ಎಂದಿದ್ದಾರೆ.
ಇದೇ ವೇಳೆ ಲೋಕಸಭೆಯಲ್ಲಿ ಪ್ರತಿಭಟನೆ ವೇಳೆ ಮೃತಪಟ್ಟ 200 ರೈತರಿಗೆ ಸಂತಾಪ ಸೂಚಿಸಲು ರಾಹುಲ್ ಗಾಂಧಿ ತಮ್ಮ ಪಕ್ಷದ ಸದಸ್ಯರು, ಟಿಎಂಸಿ, ಡಿಎಂಕೆ ಸದಸ್ಯರೊಂದಿಗೆ 2 ನಿಮಿಷಗಳ ಕಾಲ ಮೌನಾಚರಣೆ ಮಾಡಿದರು. ಸರ್ಕಾರ ಗೌರವ ನೀಡಿಲ್ಲ ಆದ್ದರಿಂದ ನಾವು ಮಾಡುತ್ತಿದ್ದೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ ಹಳೆಯ ಕುಟುಂಬ ಯೋಜನೆಯ ಘೋಷಣಾ ವಾಕ್ಯವನ್ನು ಉಲ್ಲೇಖಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್, ನಾವಿಬ್ಬರು, ನಮ್ಮವರಿಬ್ಬರು ಎಂಬಂತೆ ಕೇವಲ 4-5 ಜನರು ದೇಶವನ್ನು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.
PublicNext
12/02/2021 08:33 am