ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯ ಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.
ರಾಜ್ಯಸಭೆ ಆಯ್ಕೆ ಬಳಿಕ ಇದೀಗ ಕಾಂಗ್ರೆಸ್ ಹೈಕಮಾಂಡ್ ಮತ್ತೊಂದು ಗಿಫ್ಟ್ ನೀಡಿದ್ದು, ರಾಜ್ಯಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಮಾಡಿದೆ. ಈ ಸಂಬಂಧ ರಾಜ್ಯಸಭೆಯ ಸಭಾಧ್ಯಕ್ಷ ವೆಂಕಯ್ಯ ನಾಯ್ಡು ಅವರಿಗೆ ಪತ್ರದ ಮೂಲಕ ಮಾಹಿತಿ ನೀಡಲಾಗಿದೆ.
ವಿಪಕ್ಷ ನಾಯಕರಾಗಿದ್ದ ಗುಲಾಂನಬಿ ಆಜಾದ್ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಜವಾಬ್ದಾರಿ ನೀಡಿದೆ.
PublicNext
12/02/2021 01:35 pm