ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಪದೇ ಪದೇ ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಮಂತ್ರಿಗಿರಿ ಸಿಗದ ಕಾರಣ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಸಮರ್ಪಕವಾಗಿ ಅನುದಾನ ನೀಡುತ್ತಿಲ್ಲ ಎಂದು ಆರೋಪಿಸಿ ಯತ್ನಾಳ್ ಅವರು ಸಿಎಂ ವಿರುದ್ಧ ತೀಕ್ಷ್ಣವಾದ ಹೇಳಿಕೆಗಳನ್ನು ನೀಡುತ್ತಿದ್ದರು. ಅಷ್ಟೇ ಅಲ್ಲದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲಾಗುತ್ತದೆ, ಉತ್ತರ ಕರ್ನಾಟಕ ಭಾಗದವರು ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದರು. ಇದರಿಂದ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ಆಗಿತ್ತು.
ಯತ್ನಾಳ್ ಅವರ ನಡೆಯ ವಿರುದ್ಧ ಅಸಮಾಧಾನ ಹೊರ ಹಾಕಿರುವ ಬಿಜೆಪಿ ಹೈಕಮಾಂಡ್, 'ನೀವು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದು, ನಿಮ್ಮ ವಿರುದ್ಧ ಏಕೆ ಕ್ರಮ ಜರುಗಿಸಬಾರದು? ಈ ನೋಟಿಸ್‌ಗೆ 15 ದಿನಗಳಲ್ಲಿ ಉತ್ತರಿಸಬೇಕು'' ಎಂದು ಯತ್ನಾಳ್ ಅವರಿಗೆ ಸೂಚನೆ ನೀಡಿದೆ ಎಂಬ ಮಾಹಿತಿ ಲಭಿಸಿದೆ.
PublicNext
12/02/2021 05:27 pm