ನವದೆಹಲಿ: ಕ್ರೈಸ್ತ ಅಥವಾ ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ಇನ್ಮುಂದೆ ಯಾವುದೇ ಮೀಸಲಾತಿ ಸೌಲಭ್ಯ ಇರುವುದಿಲ್ಲ ಎಂದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಗುರುವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ''ಮತಾಂತರ ಹೊಂದಿದ ದಲಿತರು, ಮೀಸಲು ಕ್ಷೇತ್ರದಿಂದ ಲೋಕಸಭೆ ಅಥವಾ ವಿಧಾನ ಸಭೆಗೆ ಸ್ಪರ್ಧಿಸಲು ಅವಕಾಶವಿಲ್ಲ. ಅಷ್ಟೇ ಅಲ್ಲದೆ ಯಾವುದೇ ಮೀಸಲಾತಿ ಸೌಲಭ್ಯಗಳನ್ನು ಪಡೆಯುವಂತಿಲ್ಲ'' ಎಂದು ವಿವರಿಸಿದರು.
ಹಿಂದೂ, ಸಿಕ್ಖ್ ಅಥವಾ ಬೌದ್ಧ ಧರ್ಮವನ್ನು ಸ್ವೀಕರಿಸುವವರು ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರಗಳಿಂದ ಸ್ಪರ್ಧಿಸಲು ಅವಕಾಶ ಇರುತ್ತದೆ. ಇತರ ಮೀಸಲಾತಿ ಸೌಲಭ್ಯಗಳು ಸಿಗಲಿವೆ ಎಂದು ಬಿಜೆಪಿ ಸದಸ್ಯ ಜಿಎಲ್‌ವಿ ನರಸಿಂಹ ರಾವ್ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸುವ ವೇಳೆ ಸಚಿವರು ಸ್ಪಷ್ಟಪಡಿಸಿದರು.
PublicNext
12/02/2021 09:50 pm