ಬಾಗಲಕೋಟೆ: ಸಿದ್ದರಾಮಯ್ಯ ಅವರು ಸ್ವತಂತ್ರ ಪಕ್ಷ ಕಟ್ಟಿ ತಮ್ಮನ್ನೂ ಸೇರಿದಂತೆ ಐದು ಸ್ಥಾನ ಗೆದ್ದು ತೋರಿಸಲಿ ನೋಡೋಣ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಅವರಿಗೆ ಬುದ್ಧಿ ಇಲ್ಲ ಅಂತ ನನಗೂ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ.
ಬಾದಾಮಿಯಲ್ಲಿ ಶುಕ್ರವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಆಗಿದ್ದಾರೆ ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿಕೆಗೆ ಮಾತ್ರ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರ ಉದ್ಯಮಿ ಅದಾನಿಯಿಂದ ವಿದ್ಯುತ್ ಖರೀದಿಸುವ ಬದಲು ರಾಜ್ಯದಲ್ಲಿಯೇ ಸಾಕಷ್ಟು ವಿದ್ಯುತ್ ಉತ್ಪಾದನೆ ಮಾಡಬಹುದಿತ್ತು ಎಂದು ಅಭಿಪ್ರಾಯಪಟ್ಟರು. ರಾಯಚೂರಿನ ಶಕ್ತಿನಗರದಲ್ಲಿ ಹೆಚ್ಚು ವಿದ್ಯುತ್ ಉತ್ಪಾದನೆಗೆ ಕೇಂದ್ರ ಗಮನಹರಿಸಬಹುದಿತ್ತು. ಈ ಮೂಲಕ ವಿದ್ಯುತ್ ಅನ್ನು ಅನ್ಯ ರಾಜ್ಯಗಳಿಗೂ ಇಲ್ಲಿಂದಲೇ ಪೂರೈಕೆ ಮಾಡಬಹುದಿತ್ತು. ಹೀಗೆ ಮಾಡಿದ್ದಲ್ಲಿ ಕೇಂದ್ರ ಸರ್ಕಾರವು ಉದ್ಯಮಿ ಅದಾನಿ ಅವರಿಂದ ವಿದ್ಯುತ್ ಖರೀದಿಸುವುದು ತಪ್ಪುತ್ತಿತ್ತು ಎಂದು ಹೇಳಿದರು.
PublicNext
13/02/2021 10:16 am