ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಂದೆಯ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ: ವಿಜಯೇಂದ್ರ

ಬೆಂಗಳೂರು: ಸಿಎಂ ಯಡಿಯೂರಪ್ಪನವರ ಯಾವುದೇ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಗವಿಗಂಗಾಧರೇಶ್ವರ ದೇವಾಲಯದಲ್ಲಿ ಸಿಎಂ ಪುತ್ರ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ಕಿಡಿಕಾರಿದ್ದಾರೆ. ನಾನು ಪಕ್ಷದ ಕಾರ್ಯಕರ್ತ ಹಾಗೂ ರಾಜ್ಯ ಉಪಾಧ್ಯಕ್ಷ. ಪಕ್ಷ ಸಂಘಟನೆಗೆ ನಾನು ಕೆಲಸ ಮಾಡ್ತಿದ್ದೇನೆ. ನನ್ನ ಇತಿಮಿತಿ ಏನು ಅಂತ ನನಗೆ ಗೊತ್ತಿದೆ. ತಂದೆಯವರ ಕೆಲಸದಲ್ಲಿ ನಾನು ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಗರಂ ಆದರು. ಅನೇಕ ಬಾರಿ ನನ್ನ ಬಗ್ಗೆ ಚರ್ಚೆ ಆಗುತ್ತಿದೆ. ಯಾರೋ ಒಬ್ಬರು ಮಾತಾಡ್ತಾರೆ ಅಂತ ನಾನು ಮಾತಾಡೊಲ್ಲ.

ಕಾರ್ಯಕರ್ತರ ಪರಿಶ್ರಮದಿಂದ ಇಂದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ನಾನು ಸಿಎಂ ಮಗ, ಆದರೂ ಪಕ್ಷದ ಕಾರ್ಯಕರ್ತ, ರಾಜ್ಯ ಉಪಾಧ್ಯಕ್ಷ. ನನ್ನ ಇತಿಮಿತಿ ನನಗೆ ಅರಿವಿದೆ. ನಾನು ಯಾರನ್ನೋ ಮಂತ್ರಿ ಮಾಡಲು, ಯಾವುದೇ ಕೆಲಸದಲ್ಲಿ ಮೂಗು ತೂರಿಸುವ ಕೆಲಸ ಮಾಡಿಲ್ಲ. ಪಕ್ಷ ಬಲವರ್ಧನೆಗೆ ನಾನು ಕೆಲಸ ಮಾಡ್ತಿದ್ದೇನೆ ಎಂದರು.

Edited By : Nagaraj Tulugeri
PublicNext

PublicNext

13/02/2021 03:06 pm

Cinque Terre

71.72 K

Cinque Terre

1

ಸಂಬಂಧಿತ ಸುದ್ದಿ