ತುಮಕೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಬಿಜೆಪಿ ಮುಖಂಡರು ನೋಟಿಸ್ ಕೊಟ್ಟಿರುವುದಾಗಿ ಹೇಳುತ್ತಿದ್ದಾರೆ. ಆದರೆ ಈವರೆಗೂ ನನಗೆ ನೋಟಿಸ್ ಬಂದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ನನಗೆ ನೋಟಿಸ್ ಬಂದಿರುವುದು ಪಕ್ಷದ ಉಪಾಧ್ಯಕ್ಷ ವಿಜಯೇಂದ್ರ ಅವರಿಗೆ ಹೇಗೆ ಗೊತ್ತಾಯಿತು? ಯಾರ ಬಳಿಯೂ ನೋಟಿಸ್ ಪತ್ರ ಇಲ್ಲ. ನೋಟಿಸ್ ನೀಡಿರುವುದಾಗಿ ಹೇಳಿಕೆ ನೀಡಿ ಮೂರು ದಿನವಾಗಿದೆ. ಎಲ್ಲಿಯೂ ನೋಟಿಸ್ ಕಾಣಿಸುತ್ತಿಲ್ಲ. ಹೆದರಿಸುವ ಸಲುವಾಗಿ ನೋಟಿಸ್ ಕೊಡಲಾಗಿದೆ ಅಂತ ಹೇಳಲಾಗಿದೆ. ಅದಕ್ಕೆ ತಲೆಕೆಡಿಸಿಕೊಳ್ಳಬೇಡಿ ಎಂದು ಸಚಿವರೊಬ್ಬರು ದೂರವಾಣಿ ಕರೆಮಾಡಿ ನನಗೆ ಹೇಳಿದ್ದಾರೆ ಎಂದರು.
PublicNext
14/02/2021 07:43 pm