ಶಿವಮೊಗ್ಗ: ಈ ಬಾರಿ ಮಂಡಿಸಲಿರುವ ರಾಜ್ಯ ಬಜೆಟ್ ನಲ್ಲಿ ರೈತರಿಗೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದ ಸಿಎಂ ಯಡಿಯೂರಪ್ಪ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಶಿಕಾರಿಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಬಿಎಸ್‍ವೈ, ಈ ಬಾರಿ ಬಜೆಟ್ ರೈತಪರವಾಗಿ ಇರಲು ಹೆಚ್ಚಿನ ಪ್ರಯತ್ನ ಮಾಡುತ್ತಿದ್ದು, ರೈತರ ಪರವಾಗಿಯೇ ಇರಲಿದೆ. ರಾಜ್ಯದಲ್ಲಿ ಮೀಸಲಾತಿಗೆ ಆಗ್ರಹಿಸಿ ಹಲವು ಸಮುದಾಯಗಳು ಹೋರಾಟ ನಡೆಸುತ್ತಿವೆ. ಅವರ ಹೋರಾಟವನ್ನು ನಾನು ಸ್ವಾಗತಿಸುತ್ತೇನೆ. ಅವರ ಹೋರಾಟ ನ್ಯಾಯ ಬದ್ಧವಾಗಿದೆ. ಕಾನೂನು ಚೌಕಟ್ಟಿನಲ್ಲಿ, ಸಂವಿಧಾನದ ಚೌಕಟ್ಟಿನಲ್ಲಿ ಏನೇನು ಸಾಧ್ಯ ಇದೆಯೋ ಅದನ್ನೆಲ್ಲ ಕಾರ್ಯ ರೂಪಕ್ಕೆ ತರಲಾಗುವುದು ಎಂದರು.
PublicNext
15/02/2021 07:31 am