ಚೆನ್ನೈ: ತಮಿಳುನಾಡಿನಲ್ಲಿ ಕೋಟ್ಯಾಂತರ ಮೊತ್ತದ ಹಲವು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಒಟ್ಟು ₹1,000 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುವ ಐಐಟಿ ಮದ್ರಾಸ್‌ನ ‘ಡಿಸ್ಕವರಿ ಕ್ಯಾಂಪಸ್’ಗೆ ಶಂಕುಸ್ಥಾಪನೆ ನೆರವೇರಿಸಿದರು. ಎರಡು ಲಕ್ಷ ಚದರ ಮೀಟರ್‌ನಲ್ಲಿ ಈ ಕ್ಯಾಂಪಸ್ ನಿರ್ಮಾಣವಾಗಲಿದೆ. ₹3,370 ಕೋಟಿ ವೆಚ್ಚದಲ್ಲಿ ಮುಕ್ತಾಯಗೊಳಿಸಲಾದ ಚೆನ್ನೈ ಮೆಟ್ರೊ ರೈಲಿನ ಮೊದಲನೇ ಹಂತದ ವಿಸ್ತರಣೆ ಯೋಜನೆಗೆ ಪ್ರಧಾನಿ ಚಾಲನೆ ನೀಡಿದರು. ಜತೆಗೆ, ಚೆನ್ನೈ ಬೀಚ್–ಅತ್ತಿಪಟ್ಟು ನಡುವಣ ನಾಲ್ಕನೇ ಮಾರ್ಗ ಹಾಗೂ ತಂಜಾವೂರು–ಮಾಯಿಲದುತುರೈ–ತಿರುವರ ನಡುವಣ ರೈಲ್ವೆ ವಿದ್ಯುದ್ದೀಕರಣ ಯೋಜನೆಯನ್ನು ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.
ಈ ವೇಳೆ ಮಾತನಾಡಿದ ಪ್ರಧಾನಿ, ‘ತಮಿಳುನಾಡಿನ ಸಂಸ್ಕೃತಿಯನ್ನು ರಕ್ಷಿಸುವ ಕಾರ್ಯ ಕೈಗೊಳ್ಳುವುದು ಗೌರವದ ವಿಷಯವಾಗಿದೆ’ ಎಂದು ಹೇಳಿದರು. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು, ತಮಿಳು ಸಂಸ್ಕೃತಿ ಬಗ್ಗೆ ಬಿಜೆಪಿಗೆ ಗೌರವ ಇಲ್ಲ ಎಂದು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಮಾತಿಗೆ ಪ್ರತಿಯಾಗಿ ಪ್ರಧಾನಿ ಮೋದಿ ರಾಹುಲ್ ಗಾಂಧಿ ಅವರಿಗೆ ತಿರುಗೇಟು ನೀಡಿದ್ದಾರೆ.
PublicNext
15/02/2021 07:51 am