ಬೆಂಗಳೂರು: ಬಿಪಿಎಲ್ ಮಾನದಂಡಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕತ್ತಿ, ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ. ನಾನು ಸಚಿವನಾದ ಬಳಿಕ ಯಾವುದೇ ತಿದ್ದುಪಡಿ ಮಾಡಿಲ್ಲ ಎಂದು ತಿಳಿಸಿದ್ದಾರೆ.
ಈ ಹಿಂದೆ ಸಚಿವರು, 5 ಎಕ್ರೆಗಿಂತ ಹೆಚ್ಚಿನ ಜಮೀನು, ಮನೆಯಲ್ಲಿ ಬೈಕ್, ಟಿವಿ, ಫ್ರಿಡ್ಜ್ ಇದ್ದವರ ಪಡಿತರ ಚೀಟಿ ರದ್ದು ಮಾಡಲಾಗುತ್ತದೆ. ಇವುಗಳಲ್ಲಿ ಯಾವುದಾದರು ಒಂದು ಇದ್ದರೂ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುತ್ತದೆ. ಇಂಥವರಿಗೆ ತಮ್ಮ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಮಾರ್ಚ್ ಅಂತ್ಯದವರೆಗೆ ಸಮಯ ನೀಡಲಾಗುತ್ತದೆ ಎಂದು ಹೇಳಿದ್ದರು.
PublicNext
15/02/2021 03:38 pm