ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನೆಯವರೇ ಹಾವು, ಚೇಳಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಸಿಎಂ ಪುತ್ರ ಬಿ.ವೈ.ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ''ಪಾಪ, ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರಿಗೆ ಏನೂ ತಿಳಿಯತ್ತಿಲ್ಲ. ವಿಜಯೇಂದ್ರ ಮತ್ತು ಕುಟುಂಬದವರು ಮುಖ್ಯಮಂತ್ರಿ ಅಧಿಕೃತ ನಿವಾಸ ಕಾವೇರಿಯಲ್ಲಿ ಕುಳಿತು ವರ್ಗಾವಣೆ ದಂದೆ, ವಸೂಲಿ ಕೆಲಸ ಮಾಡುವ ಮೂಲಕ ದುರುಪಯೋಗ ಪಡೆಸಿಕೊಳ್ಳುತ್ತಿದ್ದಾರೆ'' ಎಂದು ದೂರಿದರು.
''ವಿಜಯೇಂದ್ರ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಮುಖ್ಯಮಂತ್ರಿಗಳು ಮುಕ್ತವಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಸಿಎಂ ಯಡಿಯೂರಪ್ಪ ಅವರ ಹೆಸರು ಕೆಡಿಸುತ್ತಿರುವವರು ಅವರ ಪರಿವಾರದವರೇ ಹೊರತು ಹೊರಗಿನವರಲ್ಲ. ವಿಜಯೇಂದ್ರನ ಕೈಕಾಲು ಒತ್ತುವವರಿಗೆ, ರಾತ್ರಿ ವ್ಯವಸ್ಥೆ ಮಾಡುವ ಚೇಲಾಗಳಿಗೆ ನಿಗಮ, ಮಂಡಳಿ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಪಕ್ಷದ ನಿಷ್ಠಾವಂತರನ್ನು ಕಡೆಗಣಿಸಲಾಗಿದೆ'' ಎಂದು ವಾಗ್ದಾಳಿ ನಡೆಸಿದರು.
PublicNext
15/02/2021 05:46 pm