ಶಿವಮೊಗ್ಗ: ಪಡಿತರ ವಿತರಣೆ ವ್ಯವಸ್ಥೆಯಲ್ಲಿ 2017ರಲ್ಲಿ ಇದ್ದ ಮಾನದಂಡವೇ ಮುಂದುವರಿಯುತ್ತದೆ. ಇದರಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ನಗರದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶ್ರೀಮಂತರು ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಪಡೆಯುತ್ತಿರುವುದು ನಿಲ್ಲಬೇಕು. ಕಾನೂನುಬಾಹಿರವಾಗಿ ಬಿಪಿಎಲ್ ಕಾರ್ಡ್ ಪಡೆದಿರುವವರು ವಾಪಸ್ ಕೊಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಎಚ್ಚರಿಕೆ ನೀಡಿದರು.
PublicNext
16/02/2021 02:13 pm