ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕುಮಾರಸ್ವಾಮಿಯವರದ್ದು ಆಧಾರರಹಿತ ಆರೋಪ: ಪೇಜಾವರ ಶ್ರೀ

ಉಡುಪಿ: ಕುಮಾರಸ್ವಾಮಿ ಟ್ವೀಟ್ ಗೆ ಪೇಜಾವರ ಶ್ರೀಗಳು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಶ್ರೀಗಳು,ಇದೊಂದು ಆಧಾರ ರಹಿತವಾದ ಆರೋಪ.ಶ್ರೀ ರಾಮ ಜನ್ಮಭೂಮಿಯ ನಿಧಿ ಸಂಗ್ರಹ ಪಾರದರ್ಶಕವಾಗಿ ನಡೆಯುತ್ತಿದೆ.

ದೇಶದ ಪ್ರತಿಯೊಂದು ರಾಮಭಕ್ತರ ಮನೆಯನ್ನು ಸಂಪರ್ಕಿಸಬೇಕು ಎನ್ನುವುದು ನಮ್ಮ ಉದ್ದೇಶ.ಈ ಉದ್ದೇಶದಿಂದ ನಿಧಿ ಸಂಗ್ರಹದ ಸಮಯದಲ್ಲಿ ಭೇಟಿ ನೀಡಿದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ.ಕಾರ್ಯಕರ್ತರು ಸಂಪರ್ಕಿಸದ ಮನೆಗಳನ್ನು ಗುರುತು ಮಾಡಿಕೊಳ್ಳುತ್ತಿದ್ದೇವೆ.

ಇದು ನಿಧಿ ಸಮರ್ಪಣೆ ಮಾಡದವರನ್ನು ಗುರುತಿಸುವ ಪ್ರಕ್ರಿಯೆಯಲ್ಲ.ಯಾವ ಮನೆಗಳು ಬಿಟ್ಟುಹೋಗಿವೆ ಅದನ್ನು ಮರು ಸಂಪರ್ಕ ಮಾಡುವ ನಿಟ್ಟಿನಲ್ಲಿ ಈ ಕೆಲಸ ಸಾಗುತ್ತಿದೆ ಎಂದು ಹೇಳಿದ್ದಾರೆ.ಇಂತಹ ಮಹತ್ಕಾರ್ಯದ ಬಗ್ಗೆ ಪ್ರತಿಕ್ರಿಯೆ ನೀಡುವಾಗ ಜವಾಬ್ದಾರಿಯುತವಾಗಿ ಇರಬೇಕು ಎಂದರು.

ಸಿದ್ದರಾಮಯ್ಯ ಜನ್ಮಭೂಮಿಗೆ ದೇಣಿಗೆ ನೀಡಲು ನಿರಾಕರಿಸಿದ ವಿಚಾರವಾಗಿ ಮಾತನಾಡಿದ ಅವರು,ಯಾರಿಗೂ ನಿಧಿ ಸಮರ್ಪಣೆ ಮಾಡುವಂತೆ ನಾವು ಒತ್ತಾಯಿಸುವುದಿಲ್ಲ.ಯಾರಿಗೆ ಇಷ್ಟವಿದೆ ಅವರು ನೀಡಬಹುದು, ಇಷ್ಟವಿಲ್ಲದವರು ನೀಡದೆ ಇರಬಹುದು.ಇನ್ನು ಜನ್ಮ ಭೂಮಿ ವಿವಾದಿತ ಪ್ರದೇಶ ಎನ್ನುವ ಅವರ ಅಭಿಪ್ರಾಯದ ಬಗ್ಗೆ ನಾವು ಪ್ರತಿಕ್ರಿಯಿಸುವುದಿಲ್ಲ.ದೇಶದ ಸರ್ವೋಚ್ಚ ನ್ಯಾಯಾಲಯವೇ ಅಯೋಧ್ಯೆ ರಾಮನ ಜನ್ಮಭೂಮಿ ಒಂದು ಒಪ್ಪಿದೆ.ದೇಶದ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಅಗೌರವದಿಂದ ಕಾಣುವವರ ಬಗ್ಗೆ ದೇಶನಿಷ್ಟೆಯ ಬಗ್ಗೆ ನಮಗೆ ಸಂದೇಹವಿದೆ ಎಂದು ಖಾರವಾಗಿ ಹೇಳಿದ್ದಾರೆ.

Edited By : Manjunath H D
PublicNext

PublicNext

16/02/2021 07:42 pm

Cinque Terre

78.14 K

Cinque Terre

1

ಸಂಬಂಧಿತ ಸುದ್ದಿ