ಹೈದರಾಬಾದ್: ಆಂಧ್ರಪ್ರದೇಶದ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರಿಗೆ ಸ್ಕೋಚ್ ಸಮೂಹದಿಂದ ‘ವರ್ಷದ ಮುಖ್ಯಮಂತ್ರಿ’ ಪ್ರಶಸ್ತಿಯನ್ನು ನೀಡಲಾಗಿದೆ.
ಸ್ಕೋಚ್ ಸಮೂಹದ ಅಧ್ಯಕ್ಷ ಸಮೀರ್ ಕೊಚ್ಚರ್ ಪ್ರಶಸ್ತಿಯನ್ನು ಸಿಎಂ ಜಗನ್ ಮೋಹನ್ ರೆಡ್ಡಿ ಅವರಿಗೆ ನೀಡಿದ್ದಾರೆ. ಕಳೆದ ಎರಡು ವರ್ಷಗಳ ಆಡಳಿತದಲ್ಲಿ ಆಂಧ್ರಪ್ರದೇಶ ಸರ್ಕಾರದ ಕ್ರಾಂತಿಕಾರಕ ಕ್ರಮಗಳನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ ಎಂದು ಸ್ಕೋಚ್ ಹೇಳಿದೆ.
PublicNext
17/02/2021 07:30 am