ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹ ವಿಚಾರವಾಗಿ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಟ್ವೀಟ್‌ನಲ್ಲಿ ಏನಿದೆ?:
''ಆಗಾಗ್ಗೆ ಈ ಮಾತು ಹೇಳುತ್ತಿರುತ್ತೇನೆ. ನಮ್ಮ ನಡುವಿನ ನಿಷ್ಕಪಟ, ಕಳಂಕವಿಲ್ಲದ ಜಾತ್ಯತೀತವಾದಿ ದೇವೇಗೌಡರು. ತಮ್ಮ ಧರ್ಮದ ಬಗ್ಗೆ ಆಳವಾದ ನಂಬಿಕೆ ಇದ್ದೂ, ಪರಧರ್ಮದ ಬಗ್ಗೆ ಅಪಾರ ಗೌರವ ಉಳ್ಳವರವರು. ಅವರಷ್ಟು ದೈವತ್ವ ನಂಬಿದವರು, ದೇಗುಲ ನೋಡಿದವರು ಇನ್ನೊಬ್ಬರಿಲ್ಲ. ದೈವದ ಮೇಲೆ ನಮ್ಮ ಕುಟುಂಬಕ್ಕಿರುವ ನಂಬಿಕೆ ಪ್ರಶ್ನಿಸುವವರು ಮೂರ್ಖರು'' ಎಂದು.
"ಪ್ರಧಾನಿ ಸ್ಥಾನ ಕೊಟ್ಟಿದ್ದೂ ದೇವರೇ, ಆ ಸ್ಥಾನದಲ್ಲಿ ಮುಂದುವರಿಯುವ ಅಥವಾ ಸ್ಥಾನ ತೊರೆಯುವ ಅವಕಾಶಗಳಿದ್ದರೂ ಸ್ಥಾನ ತೊರೆಯಬೇಕೆಂಬ ನಿರ್ಣಯ ಕೊಟ್ಟಿದ್ದೂ ದೇವರೇ," ಇದು ಶೃಂಗೇರಿ ಜಗದ್ಗುರುಗಳ ಎದುರು ದೇವೇಗೌಡರು ಪ್ರಮಾಣಿಕವಾಗಿ, ಬಹಿರಂಗವಾಗಿ ಹೇಳಿದ್ದ ಮಾತು. ಇದು ನಮ್ಮ ದೈವ ಬದ್ಧತೆಗೆ ಸಾಕ್ಷಿ. ಇದು ನಮಗಿರುವ ದೈವ ಕೃಪೆಗೂ ಸಾಕ್ಷಿ!
ರಾಮನ ಹೆಸರಿನ ಮೇಲೆ ನಡೆಯುತ್ತಿರುವ ರಾಜಕೀಯ, ಹಣದ ಕೊಳ್ಳೆ, ಅಧಿಕಾರಕ್ಕಾಗಿ ನಡೆಯುತ್ತಿರುವ ಸ್ತುತಿಯನ್ನು ಪ್ರಶ್ನೆ ಮಾಡಿದ್ದಕ್ಕೆ ನಕ(ಇ)ಲಿ ಹಿಂದೂಗಳು ಬೀದಿಗೆ ಬಿದ್ದು ಅರಚಾಡುತ್ತಿವೆ. ಇವರಿಗೆ ನೆನಪಿರಲಿ, ದೇವರಿಗಾಗಿ ನಾವು ಮಾಡಿದಷ್ಟು ಪ್ರಾರ್ಥನೆ, ಪೂಜೆಗಳ ಮುಂದೆ, ಈ ನಕಲಿಗಳು ಮಾಡಿದ 'ಅಧಿಕಾರ ರಾಮ ಜಪ' ಕಾಲು ಭಾಗಕ್ಕೂ ಸಾಲದು.
PublicNext
17/02/2021 12:58 pm