ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ಮೆಡಿಕಲ್ ಕಾಲೇಜ್‌ಗಳ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗೋವಾ ಹಾಗೂ ಬೆಳಗಾವಿಯಿಂದ ಬಂದ ಆರು ಜನ ಐಟಿ ಅಧಿಕಾರಿಗಳ ತಂಡವು ದಾಳಿ ನಡೆಸಿದೆ. ಈ ಮೂಲಕ ಶಾಮನೂರು ಶಿವಶಂಕರಪ್ಪ ಅವರ ಒಡೆತನದ ದಾವಣಗೆರೆಯ ಜೆಜೆಎಂ, ಎಸ್‍ಎಸ್ ಮೆಡಿಕಲ್ ಕಾಲೇಜ್ ಹಾಗೂ ಬಾಪೂಜಿ ಡೆಂಟಲ್ ಕಾಲೇಜ್‌ಗಳಲ್ಲಿ ಕಡತ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ವಿದ್ಯಾರ್ಥಿಗಳ ಕಾಲೇಜ್ ಆಡಳಿತ ಮಂಡಳಿ ಸಂಗ್ರಹಿಸಿದ ಶುಲ್ಕ ಮತ್ತು ಸರ್ಕಾರ ನಿಗದಿ ಮಾಡಿದ ಶುಲ್ಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ.
PublicNext
17/02/2021 01:51 pm