ಬೆಂಗಳೂರು: ಮಹಾತ್ಮಾ ಗಾಂಧೀಜಿ, ನೆಹರೂ, ಅಂಬೇಡ್ಕರ್ ಸಹ ಆರ್‌ಎಸ್‌ಎಸ್‌ನ ಕಾರ್ಯದ ಬಗ್ಗೆ ಶ್ಲಾಘಿಸಿದ್ದಾರೆ. ಆರ್‌ಎಸ್‌ಎಸ್ ಬಗ್ಗೆ ಜನತೆಗೆ ಧೈರ್ಯದ ಭಾವನೆ ಇದೆಯೇ ಹೊರತು ಹೆದರಿಕೆಯ ಭಾವನೆ ಇಲ್ಲ. ಇವನ್ನೆಲ್ಲಾ ತಿಳಿದು ಇನ್ನಾದರೂ ದೇಶವನ್ನು, ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ಬಿಜೆಪಿ ಮುಖಂಡ ರಾಮದಾಸ್ ಅವರು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
ರಾಮ ಮಂದಿರ ನಿಧಿ ಸಂಗ್ರಹಣಾ ಅಭಿಯಾನದಲ್ಲಿ ಹಿಂದೂಗಳು ಮಾತ್ರವಲ್ಲದೇ, ಮುಸಲ್ಮಾನ, ಕ್ರೈಸ್ತರೂ ಸಹ ದೇಣಿಗೆಯನ್ನು ರಾಮನ ಚರಣಕ್ಕೆ ಅರ್ಪಿಸಿದ್ದಾರೆ. ಇದನ್ನೊಂದು ಬಾರಿ ತಿಳಿಯುವ ಪ್ರಯತ್ನ ಮಾಡಿ. ಯಾರ ಮನಸ್ಸಲ್ಲೂ ಇಲ್ಲದ ವಿಷ ಬೀಜ ಬಿತ್ತುವ ಕೆಲಸ ಮಾಡಬೇಡಿ ಎಂದು ರಾಮದಾಸ್ ಟ್ವೀಟ್ ಮಾಡಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಅವರೇ ನೀವು ಅಂತಃಕರಣದಿಂದ ಮಾತನಾಡಿ, ನೀವು, ನಿಮ್ಮ ಸಹೋದರ ಹಾಗೂ ನಿಮ್ಮ ಪಿತಾಶ್ರೀ ಅವರು ತಿಂಗಳಲ್ಲಿ ಹೆಚ್ಚಿನ ದಿನ ಪೂಜೆ, ಹೋಮಗಳಲ್ಲೇ ತೊಡಗುತ್ತೀರಿ ಎಂಬುದು ಜನತೆಗೆ ಗೊತ್ತಿರುವ ವಿಷಯ ಎಂದು ಹೇಳಿದ್ದಾರೆ.
PublicNext
17/02/2021 03:53 pm