ಶಿವಮೊಗ್ಗ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮ ಮಂದಿರಕ್ಕೆ ಸಂಬಂಧಿಸಿದಂತೆ ಬಲವಂತವಾಗಿ ಯಾರಲ್ಲೂ ದೇಣಿಗೆ ಕೇಳುತ್ತಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮ ಮಂದಿರಕ್ಕಾಗಿ ನಡೆಯುತ್ತಿರುವ ದೇಣಿಗೆ ಸಂಗ್ರಹ ಸಂಬಂಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಇಲ್ಲ ಸಲ್ಲದ ಹೇಳಿಕೆ ನೀಡುತ್ತಿದ್ದಾರೆ. ತತ್‌ಕ್ಷಣವೇ ಇದಕ್ಕೆ ಪೂರ್ಣವಿರಾಮ ಹಾಕಬೇಕು ಎಂದು ಒತ್ತಾಯಿಸಿದರು.
ಹಿಂದೂ, ಮುಸ್ಲಿಂ, ಕ್ರೈಸ್ತ ಎಂಬ ಭೇದ ಇಲ್ಲದೆ ಎಲ್ಲರೂ ತಮ್ಮ ಕೈಲಾದಷ್ಟು ದೇಣಿಗೆ ನೀಡುತ್ತಿದ್ದಾರೆ. ಹೇಳಿಕೆ ನೀಡುತ್ತಿರುವವರು ದೇಣಿಗೆ ಕೊಡದಿದ್ದರೆ ಬೇಡ. ಆದರೆ ಈ ವಿಚಾರದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಬಾರದು. ಬೇರೆ ಕಡೆ ಮಂದಿರ ನಿರ್ಮಿಸಿದರೆ ದೇಣಿಗೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿರುವುದು ಸರಿಯಲ್ಲ. ಇಂತಹ ಹೇಳಿಕೆಗಳು ಸುಪ್ರೀಂ ಕೋರ್ಟ್ ತೀರ್ಪನ್ನೇ ಪ್ರಶ್ನಿಸಿದಂತೆ. ಅವರು ಈ ರೀತಿ ಹಗುರವಾಗಿ ಮಾತನಾಡಬಾರದು ಎಂದರು ಹೇಳಿದರು.
PublicNext
18/02/2021 07:28 am