ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಹಾಗೂ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾ ರೆಂದು ವರದಿಗಳಿಂದ ತಿಳಿದುಬಂದಿದೆ.
ಕಳೆದ ಕೆಲ ತಿಂಗಳುಗಳಿಂದ ಇವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ವಿಚಾರ ಬಹಳ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ದಿನಾಂಕ ನಿಗದಿಯಾಗಿದೆ. ಫೆ.26 ಕ್ಕೆ ಕಾಂಗ್ರೆಸ್ ಪಕ್ಷವನ್ನು ಶಾಸಕ ಶರತ್ ಬಚ್ಚೇಗೌಡ ಸೇರ್ಪಡೆ ಆಗಲಿದ್ದಾರೆಂದು ಹೇಳಲಾಗುತ್ತಿದೆ.
ದಿನಾಂಕಗಳು ನಿಗದಿಯಾಗಿಲ್ಲ. ಆದರೆ, ಫೆಬ್ರವರಿ ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಬೇಕು ಎಂದು ಕೊಂಡಿದ್ದೇನೆಂದು ಶರತ್ ಅವರು ತಿಳಿಸಿದ್ದಾರೆ.ನಿಮ್ಮ ನಿರ್ಧಾರಕ್ಕೆ ನಿಮ್ಮ ತಂದೆ ಬಚ್ಚೇಗೌಡ ಅವರು ಒಪ್ಪಿಗೆ ನೀಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಶರತ್ ಅವರು, ಎಲ್ಲಾ ವಿಚಾರಗಳು ಜನರಿಗೆ ತಿಳಿದಿದೆ. ತಂದೆಯವರಿಗೆ ನಾನು ಯಾವುದೇ ಮಾಹಿತಿಯನ್ನೂ ನೀಡಿಲ್ಲ. ಎಲ್ಲವೂ ಅವರಿಗೆ ಗೊತ್ತಿದೆ ಎಂದಿದ್ದಾರೆ.
PublicNext
18/02/2021 04:33 pm