ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರತ್ಯೇಕ ರಾಜ್ಯ ಕೂಗು ಸರಿಯಲ್ಲ: ಲಕ್ಷ್ಮಣ ಸವದಿ

ಕಲಬುರ್ಗಿ: ತಮ್ಮ ಪ್ರದೇಶವನ್ನು ಸರ್ಕಾರ ನಿರ್ಲಕ್ಷಿಸಿದೆ ಎಂಬ ಕಾರಣಕ್ಕೆ ಆ ಭಾಗದ ಸಂಘಟನೆಗಳು ಪ್ರತ್ಯೇಕ ರಾಜ್ಯದ ಕೂಗು ಎತ್ತುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ, ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಗುರುವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸವದಿ, ಕೆಲವೊಂದು ಯೋಜನೆಗಳು ಕೈ ತಪ್ಪಿದಾಗ ಅಸಮಾಧಾನ ಆಗುವುದು ಸಹಜ. ಆದರೆ ಪ್ರತ್ಯೇಕ ರಾಜ್ಯ ಯಾವುದೇ ಸಮಸ್ಯೆಗಳಿಗೂ ಪರಿಹಾರ ಅಲ್ಲ ಎಂದರು.

ಏಮ್ಸ್, ಜವಳಿ ಪಾರ್ಕ್ ಸೇರಿದಂತೆ ವಿವಿಧ ಯೋಜನೆಗಳು ಕಲಬುರ್ಗಿ ಕೈ ತಪ್ಪಿದ ವಿಚಾರವಾಗಿ ಜನರು ಬೇಸರ ಪಡುವ ಅಗತ್ಯವಿಲ್ಲ. ಈ ಭಾಗದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಕೊರೋನಾ, ಲಾಕ್ ಡೌನ್, ಅತಿವೃಷ್ಟಿ ಇತ್ಯಾದಿಗಳ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಾಗಿ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿ ಕೆಲಸ ಮಾಡಲಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಸುಧಾರಿಸಬಹುದು ಎಂದೂ ಆಶಯ ವ್ಯಕ್ತಪಡಿಸಿದರು.

Edited By : Nagaraj Tulugeri
PublicNext

PublicNext

18/02/2021 05:12 pm

Cinque Terre

87.26 K

Cinque Terre

6