ಬೆಂಗಳೂರು: ‘ಬಿಹಾರದ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಿಎಂ ಪುತ್ರ ವಿಜಯೇಂದ್ರ ತಮ್ಮ ಆಪ್ತರ ಮೂಲಕ ಹಣ ಕಳುಹಿಸಿದ್ದಾರೆ. ಬಿಹಾರದಲ್ಲಿ ಪ್ರಧಾನಿ ಮೋದಿ ಅವರ ಶಕ್ತಿ ಕುಗ್ಗಿಸಲು ಈ ಹಣ ಬಳಕೆಯಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದಾರೆ.
ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್‌ಜೆಡಿ, ಕಾಂಗ್ರೆಸ್‌ಗೆ ವಿಜಯೇಂದ್ರ ಫಂಡಿಂಗ್ ಮಾಡಿದ್ದಾರೆ. ಈ ಬಗ್ಗೆಯೂ ತನಿಖೆ ಆಗಬೇಕು ಎಂದು ಒತ್ತಾಯಿಸಿದರು. ‘ಪಕ್ಷದಿಂದ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ’ ಎಂದರು. ‘ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಇರಬಾರದು ಎನ್ನುವುದು ನರೇಂದ್ರ ಮೋದಿ ಆಶಯ. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ' ಎಂದು ಟೀಕಿಸಿದರು.
PublicNext
19/02/2021 10:18 am