ರಾಯಚೂರು: ಅಯೋಧ್ಯೆಯ ರಾಮಮಂದಿರ ನಿರ್ಮಾಣ ವಿವಾದಿತ ಎಂದಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಈಶ್ವರಪ್ಪ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ.
ನಗರದ ಜಿಪಂ ಸಭಾಂಗಣದಲ್ಲಿ ಆಯೋಜಿಸಲಾದ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾತನಾಡಿದ ಅವರು, ವಿವಾದಿತ ಸ್ಥಳದಲ್ಲಿ ಮಂದಿರ ನಿರ್ಮಾಣಕ್ಕೆ ಹಣ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ತೀರ್ಪಿಗೆ ಗೌರವವಿಲ್ಲದೆ ಮಾತನಾಡಿದ್ದಾರೆ. ಮಂದಿರ ನಿರ್ಮಾಣದ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾರು? ಅವನು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಬಹುದೇ ಅಂತ ಪ್ರಶ್ನಿಸಿದರು. ಕೂಲಿ ಮಾಡುವ ಜನ 10 ರೂಪಾಯಿ ನೀಡಿದ್ದಾರೆ, ಅವರು ಲೆಕ್ಕ ಕೇಳಲಿ ಇವನ್ಯಾರು ಲೆಕ್ಕ ಕೇಳಲು ಅಂತ ಈಶ್ವರಪ್ಪ ಸಿದ್ದರಾಮಯ್ಯ ವಿರುದ್ದ ಕಿಡಿ ಕಾರಿದರು.
PublicNext
19/02/2021 02:07 pm