ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್

ಕೋಲ್ಕತಾ: ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮಬಂಗಾಳದ ನಿಯೋಜಿತ ಸಂಸದ/ಶಾಸಕ ನ್ಯಾಯಾಲಯವು ಗೃಹ ಸಚಿವ ಅಮಿತ್ ಶಾ ಅವರಿಗೆ ಫೆಬ್ರವರಿ 22ಕ್ಕಿಂತ ಮೊದಲು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ತನ್ನ ಎದುರು ಹಾಜರಾಗುವಂತೆ ಶುಕ್ರವಾರ ಸಮನ್ಸ್ ನೀಡಿದೆ.

ಅಭಿಷೇಕ್ ಬ್ಯಾನರ್ಜಿ ಅವರು ದಾಖಲಿಸಿದ್ದ ಮಾನಹಾನಿ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಸಮನ್ಸ್ ಜಾರಿ ಮಾಡಿದೆ. 2018 ರ ಆಗಸ್ಟ್ 11 ರಂದು ಕೋಲ್ಕತ್ತಾದ ಮಾಯೊ ರಸ್ತೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಶಾ ಅವರು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರಿಗೆ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು ಎಂದು ದೂರು ದಾಖಲಿಸಲಾಗಿತ್ತು. ಅಭಿಷೇಕ್ ಬ್ಯಾನರ್ಜಿ ಪರ ವಕೀಲ ಸಂಜಯ್ ಬಸು ಅವರು ನ್ಯಾಯಾಲಯದಲ್ಲಿ ವಾದಮಂಡಿಸಿದ್ದರು. ವಾದವನ್ನು ಆಲಿಸಿರುವ ನ್ಯಾಯಾಧೀಶರು ಖುದ್ದು ಅಮಿತ್ ಶಾ ಹಾಜರಾಗುವಂತೆ ತಿಳಿಸಿದ್ದಾರೆ ಎಂದು ಸಂಜಯ್ ಬಸು ತಿಳಿಸಿದ್ದಾರೆ.

Edited By : Nirmala Aralikatti
PublicNext

PublicNext

19/02/2021 07:20 pm

Cinque Terre

114.98 K

Cinque Terre

23

ಸಂಬಂಧಿತ ಸುದ್ದಿ