ನವದೆಹಲಿ: ಇಂಧನ ಬೆಲೆ ಏರಿಕೆ ನಿಯಂತ್ರಣ ಸರ್ಕಾರದಿಂದ ಸಾಧ್ಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂಧನ ಬೆಲೆ ಏರಿಕೆ ಗಂಭೀರವಾದ ವಿಷಯವಾಗಿದ್ದು, ಮುಂದಿನ ದಿನಗಳಲ್ಲಿ ಬೆಲೆ ಇಳಿಕೆ ಆಗುವರೆಗೂ ಏರಿಕೆ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಲಾರದು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜೊತೆಯಾಗಿ ಇಂಧನವನ್ನು ಕಡಿಮೆ ಬೆಲೆಗೆ ಗ್ರಾಹಕರಿಗೆ ತಲುಪಿಸುವ ಕುರಿತು ಚರ್ಚೆ ನಡೆಸಬೇಕಿದೆ. ಒಪೆಕ್ ರಾಷ್ಟ್ರಗಳು ತೈಲ ಉತ್ಪಾದನೆಯನ್ನ ಕಡಿಮೆ ಅಥವಾ ನಿಲ್ಲಿಸುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ತೈಲ ಬೆಲೆಯನ್ನ ನಿಯಂತ್ರಿಸಲು ಸರ್ಕಾರದಿಂದ ಸಾಧ್ಯವಿಲ್ಲ. ಈಗಾಗಲೇ ತೈಲ ಮಾರುಕಟ್ಟೆಯನ್ನ ಮುಕ್ತವಾಗಿದ್ದು, ಕಂಪನಿಗಳು ಆಮದು ಮಾಡಿಕೊಂಡು ಮಾರಾಟ ಮಾಡುತ್ತವೆ ಎಂದು ಹೇಳಿದರು.
PublicNext
20/02/2021 04:18 pm