ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ: ಸಿದ್ದರಾಮಯ್ಯಗೆ ಬಿಜೆಪಿ ವಾರ್ನಿಂಗ್

ಬೆಂಗಳೂರು: ರಾಮ ಮಂದಿರ ನಿರ್ಮಾಣ ಹಾಗೂ ದೇಣಿಗೆ ಸಂಗ್ರಹ ವಿಚಾರವಾಗಿ ಹೇಳಿಕೆ ನೀಡಿದ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಫುಲ್ ಗರಂ ಆಗಿದೆ.

ಮೊದಲು ಟ್ವೀಟ್ ಮಾಡಿದ್ದ ಸಿದ್ದರಾಮಯ್ಯ ಅವರು, ''ನಮ್ಮೂರಿನಲ್ಲಿ ನಾನು ರಾಮ ಮಂದಿರ ನಿರ್ಮಾಣ ಮಾಡುತ್ತಿದ್ದೇನೆ. ದೇವರ ಬಗ್ಗೆ ನಮಗೂ ಭಕ್ತಿ ಇದೆ, ನಮ್ಮ ಶ್ರದ್ಧೆ, ನಂಬಿಕೆಗಳು ವೈಯಕ್ತಿಕ ವಿಚಾರಗಳಾಗಿರಬೇಕೇ ಹೊರತು ರಾಜಕೀಯ ಅಸ್ತ್ರಗಳಾಗಬಾರದು. ರಾಮ ಮಂದಿರ ನಿರ್ಮಾಣ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಲಾಭ ಪಡೆಯಲು ಹೊರಟಿರುವುದು ನಾಚಿಕೆಗೇಡು'' ಎಂದು ಆರೋಪಿಸಿದ್ದರು.

ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ, ''ಮಾನ್ಯ ಸಿದ್ದರಾಮಯ್ಯ ಅವರೇ, ದೇಶದ ನ್ಯಾಯಾಂಗ ವ್ಯವಸ್ಥೆಯ ಆಧಾರದಲ್ಲಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ರಾಮಮಂದಿರ ನಿರ್ಮಾಣ ಮಾಡುತ್ತಿರುವುದು ಯಾವುದೇ ಪಕ್ಷ, ಸಂಘಟನೆಗಳಲ್ಲ. ನ್ಯಾಯಾಲಯವೇ ಸೂಚಿಸಿದ ಟ್ರಸ್ಟ್‌ ಮುಖೇನ ರಾಮಮಂದಿರ ನಿರ್ಮಾಣವಾಗುತ್ತಿದೆ. ರಾಜಕೀಯ ಲಾಭ ಪಡೆಯುತ್ತಿರುವುದು‌ ನಿಮ್ಮಂತವರೇ ಹೊರತು ಬೇರಾರಲ್ಲ'' ಎಂದು ತಿಳಿಸಿದೆ.

ಮತ್ತೊಂದು ಟ್ವೀಟ್‌ನಲ್ಲಿ, ''ನ್ಯಾಯಾಲಯ ತೀರ್ಪು ನೀಡಿದ ಮೇಲೂ, ವಿವಾದಿತ ಜಾಗವೆನ್ನುವ ಮೂಲಕ ನಿಮ್ಮ ಅಲ್ಪ ಜ್ಞಾನವನ್ನು ಪ್ರದರ್ಶಿಸಿದ್ದೀರಿ. ನಿಮ್ಮ ನಾಲಿಗೆಯನ್ನು ನಿಯಂತ್ರಿಸಿಕೊಳ್ಳಿ. ಸ್ಥಿರತೆಯಿಲ್ಲದೆ ಮಾತನಾಡುವ ನಿಮ್ಮನ್ನು ಜನರು ತಿರಸ್ಕರಿಸಿದ್ದಾರೆ. ರಾಮಮಂದಿರಕ್ಕೆ ವಿರೋಧಿಸಿದ್ದ ನೀವು ಈಗ ಶ್ರದ್ಧೆ, ನಂಬಿಕೆ ಎಂದು ಊಸರವಳ್ಳಿಯಂತೆ ನಟಿಸುತ್ತಿದ್ದೀರಿ'' ಎಂದು ಎಚ್ಚರಿಕೆ ನೀಡಿದೆ.

Edited By : Vijay Kumar
PublicNext

PublicNext

20/02/2021 06:24 pm

Cinque Terre

97.31 K

Cinque Terre

4

ಸಂಬಂಧಿತ ಸುದ್ದಿ