ಲಕ್ನೋ: ರಾಮ ಮಂದಿರ ನಿರ್ಮಾಣಕ್ಕೆ ಅಂತೆಯೇ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೊಸೆ ಅಪರ್ಣಾ ಯಾದವ್ ಅವರು ಕೂಡ 11 ಲಕ್ಷ ದೇಣಿಗೆ ನೀಡಿದ್ದಾರೆ.
ಬಳಿಕ ಮಾತನಾಡಿದ ಅವರು, ರಾಮಂದಿರ ನಿರ್ಮಾಣಕ್ಕೆ ನಾನು ಸ್ವ-ಇಚ್ಛೆಯಿಂದ ದೇಣಿಗೆ ನೀಡಿದ್ದೇನೆ. ನನ್ನ ಕುಟುಂಬ ಮಾಡಿದ್ದಕ್ಕೆ ನಾನು ಜವಾಬ್ದಾರಿಯಾಗಲಾರೆ. ಹಿಂದೆ ನಡೆದಿರುವ ಘಟನೆಯಗಳು ಎಂದಿಗೂ ಮುಂದಿನ ಭವಿಷ್ಯಕ್ಕೆ ಸಮನಾಗಿರುವುದಿಲ್ಲ ಎಂದು ಅಪರ್ಣಾ ಹೇಳಿದ್ದಾರೆ.
ನನಗೆ ರಾಮನಲ್ಲಿ ನಂಬಿಕೆ ಹಾಗೂ ಗೌರವ ಇದೆ. ಹೀಗಾಗಿ ಸ್ವಯಂಪ್ರೇರಿತರಾಗಿ ನಾನು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 11 ಲಕ್ಷ ದೇಣಿಗೆ ನೀಡಿದ್ದೇನೆ. ಅಲ್ಲದೆ ಪ್ರತಿಯೊಬ್ಬ ಭಾರತೀಯ ಕೂಡ ದೇಣಿಗೆ ನೀಡಬೇಕು ಎಂದು ಅವರು ಕರೆ ನೀಡಿದರು.
PublicNext
21/02/2021 08:28 am