ಉಡುಪಿ: ರಾಮಮಂದಿರ ನಿರ್ಮಾಣ ಸಂಬಂಧ ದೇಣಿಗೆ ಸಂಗ್ರಹಿಸಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿರುವುದು ನಿಜವೇ ಆಗಿದ್ದರೆ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ವಿಶ್ವಸ್ಥರಾಗಿರುವ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.
ದಿ ನ್ಯೂ ಇಂಡಿಯನ್ ಎಕ್ಸ್'ಪ್ರೆಸ್ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಶ್ರೀಗಳು, ರಾಮಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸುವ ಜವಾಬ್ದಾರಿಯನ್ನು ದೇಶದ ದೊಡ್ಡ ಸಂಘಟನೆಗಳಾದ ಆರ್‌ಎಸ್‌ಎಸ್ ಮತ್ತು ವಿಎಚ್‌ಪಿಗೆ ನೀಡಲಾಗಿದೆ. ದೇಣಿಗೆ ಸಂಗ್ರಹ ಮಾಡಲು ಬಂದ ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆಂದು ಕುಮಾರಸ್ವಾಮಿಯವರು ಹೇಳಿದ್ದಾರೆ. ಒಂದು ವೇಳೆ ಇದು ನಿಜವಾಗಿದ್ದರೆ, ಕುಮಾರಸ್ವಾಮಿಯವರು ಪೊಲೀಸರಿಗೆ ದೂರು ನೀಡಲಿ ಎಂದು ಹೇಳಿದ್ದಾರೆ.
PublicNext
21/02/2021 11:08 am