ಬೆಂಗಳೂರು: ಪಕ್ಷ ಬಿಟ್ಟು ಹೋದವರು ಮತ್ತೆ ಸೇರ್ಪಡೆಗೆ ಅವಕಾಶ ಕೊಡುತ್ತಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವವರಿಗೆ ಮರಳಿ ಪಕ್ಷಕ್ಕೆ ಸೇರ್ಪಡೆಗೆ ಆಹ್ವಾನ ನೀಡಿದ್ದಾರೆ.
ನಗರದಲ್ಲಿ ಭಾನುವಾರ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಮಲಿಂಗಾರೆಡ್ಡಿ, ಧ್ರುವ ನಾರಾಯಣ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೇರುವವರಿಗೆ ನಾನು ಮುಕ್ತ ಆಹ್ವಾನ ಕೊಡುತ್ತಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಪಕ್ಷದ ತತ್ವ -ಸಿದ್ಧಾಂತಗಳನ್ನು ಒಪ್ಪಿಕೊಂಡು ಬರುವ ಯಾರನ್ನಾದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕಾಗಿ ಒಂದು ಸಮಿತಿ ರಚನೆ ಮಾಡಲಾಗುವುದು. ಯಾರೆಲ್ಲ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದೀರೋ ಅವರು ಮತ್ತೆ ಪಕ್ಷಕ್ಕೆ ಮರಳಿ ಬರಬಹುದು ಎಂದು ತಿಳಿಸಿದ್ದಾರೆ.
ನಾನು ಮುಂದಿನ ಮುಖ್ಯಮಂತ್ರಿ ಎಂದು ಕಾರ್ಯಕರ್ತರು ಘೋಷಣೆ ಕೂಗುತ್ತಾರೆ. ಆದರೆ ನನಗೆ ಇದು ಬೇಕಾಗಿಲ್ಲ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಮಾತ್ರ ನನಗೆ ಮುಖ್ಯ ಎನ್ನುವ ಮೂಲಕ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಆಪ್ತರ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.
PublicNext
21/02/2021 03:40 pm