ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪಂಚಮಸಾಲಿ ಸಮಾವೇಶದಲ್ಲಿ ಕಣ್ಣೀರಿಟ್ಟ ಶಿವಲೀಲಾ ವಿನಯ್ ಕುಲಕರ್ಣಿ

ಬೆಂಗಳೂರು: 2ಎ ಮೀಸಲಾತಿಗಾಗಿ ಬೆಂಗಳೂರಿನಲ್ಲಿ ಪಂಚಮಸಾಲಿ ಸಮುದಾಯದ ಜನ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದಾರೆ. ಈ ವೇಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಕುಲಕರ್ಣಿ ವೇದಿಕೆ ಮೇಲೆ ಮಾತನಾಡುವಾಗಲೇ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ.

ಕಾರ್ಯಕ್ರಮದಲ್ಲಿ ಸಂಘಟಕರು ಶಿವಲೀಲಾ ಅವರನ್ನು ವೇದಿಕೆ ಮುಂಭಾಗಕ್ಕೆ ಆಹ್ವನಿಸಿದ್ದಾರೆ. ಈ ವೇಳೆ ಮೈಕ್ ಹಿಡಿಯುತ್ತಲೇ ಶಿವಲೀಲಾ ಕುಲಕರ್ಣಿ ಅವರು ಕಣ್ಣೀರು ಹಾಕಿದ್ದಾರೆ. ಕೂಡಲೇ ಮಧ್ಯ ಪ್ರವೇಶಿಸಿದ ವಚನಾನಂದ ಶ್ರೀಗಳು ಈ ಪಾದಯಾತ್ರೆಯಲ್ಲಿ ಭಾಗವಹಿಸಲು ನನ್ನನ್ನು ಪ್ರೇರೇಪಿಸಿದ್ದೇ ವಿನಯ್ ಕುಲಕರ್ಣಿ. ಸದ್ಯ ಅವರು ಆರೋಪಿಯೇ ಹೊರತು ಅಪರಾಧಿ ಅಲ್ಲ. ಪಂಚಮಸಾಲಿ ಸಮುದಾಯ ವಿನಯ್ ಕುಲಕರ್ಣಿ ಅವರ ಕುಟುಂಬದ ಬೆಂಬಲಕ್ಕೆ ಇದೆ. ವಿನಯ್ ಅವರು ಪಂಚಮಸಾಲಿ ಸಮುದಾಯದ ಶ್ರೇಷ್ಟ ನಾಯಕ‌. ಅವರು ಆರೋಪ ಮುಕ್ತರಾಗಿ ಬರುತ್ತಾರೆ ಎಂದರು.

2016ರಲ್ಲಿ ನಡೆದ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

Edited By : Nagaraj Tulugeri
PublicNext

PublicNext

21/02/2021 03:53 pm

Cinque Terre

72.78 K

Cinque Terre

15