ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುದುಚೇರಿ 'ಕೈ' ಸರ್ಕಾರಕ್ಕೆ ತಳಮಳ: ಮತ್ತಿಬ್ಬರು ಶಾಸಕರು ರಾಜೀನಾಮೆ

ಪುದುಚೇರಿ: ಪುದುಚೇರಿಯಲ್ಲಿ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಪಕ್ಷದ ನಡತೆಯಿಂದ ಬೇಸತ್ತು ಒಬ್ಬರ ಹಿಂದೊಬ್ಬರು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಇದು ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಬಹುಮತವನ್ನೇ ಕಸಿದುಕೊಂಡಿದೆ.

ಫೆಬ್ರವರಿ.22ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ನಾರಾಯಣಸಾಮಿ ಅವರಿಗೆ ವಿಶ್ವಾಸ ಮತಯಾಚನೆಗೆ ಆದೇಶಿಸಲಾಗಿದೆ. ಈ ಮಧ್ಯೆ ಮಿತ್ರಪಕ್ಷ ಡಿಎಂಕೆಯ ಶಾಸಕರೊಬ್ಬರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಕೆ.ಲಕ್ಷ್ಮೀನಾರಾಯಣನ್ ರಾಜೀನಾಮೆ ಬೆನ್ನಲ್ಲೇ, ಸೋಮವಾರ ಸರ್ಕಾರವು ತೀವ್ರ ಬಿಕ್ಕಟ್ಟಿಗೆ ಸಿಲುಕಲಿದೆ.

ಕಾಂಗ್ರೆಸ್‌ ಸರ್ಕಾರವು ಅಲ್ಪಮತಕ್ಕೆ ಕುಸಿಯುವ ಆತಂಕ ಎದುರಾಗಿದೆ. 30 ಶಾಸಕ ಸ್ಥಾನ ಬಲವಿರುವ ವಿಧಾನಸಭೆಯಲ್ಲಿ ಕಾಂಗ್ರೆಸ್ 11, ಡಿಎಂಕೆ 3 ಮತ್ತು ಒಬ್ಬ ಪಕ್ಷೇತರ ಶಾಸಕನ ಬೆಂಬಲದಿಂದ ಸರ್ಕಾರ ರಚಿಸಲಾಗಿತ್ತು. ವಿರೋಧ ಪಕ್ಷವಾಗಿ ಎನ್‌ಆರ್ ಕಾಂಗ್ರೆಸ್ 7, ಎಐಎಡಿಎಂಕೆ 4 ಮತ್ತು ಬಿಜೆಪಿಯ ಮೂವರು ನಾಮನಿರ್ದೇಶಿತ ಶಾಸಕರಿದ್ದು, 14 ಸದಸ್ಯ ಬಲವನ್ನು ಹೊಂದಿತ್ತು. ಈ ರಾಜೀನಾಮೆಯಲ್ಲಿ ಪುದುಚೇರಿ ಶಾಸಕಾಂಗದ ಸಂಖ್ಯಾಬಲ 13ಕ್ಕೆ ಕುಸಿದಿದೆ.

Edited By : Vijay Kumar
PublicNext

PublicNext

21/02/2021 08:05 pm

Cinque Terre

82.46 K

Cinque Terre

7

ಸಂಬಂಧಿತ ಸುದ್ದಿ