ಕಾಸರಗೋಡು: ಕೇರಳ ಸರ್ಕಾರವು 'ಲವ್ ಜಿಹಾದ್' ತಡೆಯಲು ರಚನಾತ್ಮಕ ಕ್ರಮಗಳನ್ನು ಕೈಗೊಂಡಿಲ್ಲ. ಈ ವಿಚಾರದಲ್ಲಿ ನಿದ್ದೆ ಮಾಡುತ್ತಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಕೇರಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ‘ವಿಜಯ ಯಾತ್ರೆ’ ಉದ್ಘಾಟಿಸಲಾಯಿತು. ಈ ವೇಳೆ ಮಾತನಾಡಿದ ಅವರು, ''ಲವ್ ಜಿಹಾದ್ ಕೇರಳವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಪರಿವರ್ತಿಸಲಿದೆ ಎಂದು 2009ರಲ್ಲಿ ಕೇರಳ ಹೈಕೋರ್ಟ್ ಕಳವಳ ವ್ಯಕ್ತಪಡಿಸಿತ್ತು. ಆದರೆ ಕೇರಳ ಸರ್ಕಾರವು ನಿದ್ದೆ ಮಾಡುತ್ತಿದೆ. ನಮ್ಮ ಸರ್ಕಾರವು (ಉತ್ತರ ಪ್ರದೇಶ) ಲವ್ ಜಿಹಾದ್ ಮತ್ತು ಬಲವಂತದ ಮತಾಂತರ ತಡೆಗೆ ಕಾನೂನು ರೂಪಿಸಿದೆ'' ಎಂದು ಹೇಳಿದರು.
PublicNext
21/02/2021 09:26 pm