ಬೆಂಗಳೂರು: ಸಿಎಂ ಯಡಿಯೂರಪ್ಪ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಸಿಡಿದಿದ್ದಾರೆ. ನಿನ್ನೆ ಫೆ. 21ರಂದು ಬೆಂಗಳೂರಿನಲ್ಲಿ ನಡೆದ ಪಂಚಮಸಾಲಿ ಮೀಸಲಾತಿ ಹೋರಾಟದ ಸಮಾವೇಶದಲ್ಲಿ ಯತ್ನಾಳ್ ಅವರು ಸಿಎಂ ವಿರುದ್ಧ ಮತ್ತೊಮ್ಮೆ ಗುಡುಗಿದ್ದಾರೆ. ಈ ಬಗ್ಗೆ ಗರಂ ಆಗಿರುವ ಬಿಜೆಪಿ ಹೈಕಮಾಂಡ್ ದೆಹಲಿಗೆ ಬರುವಂತೆ ಬುಲಾವ್ ನೀಡಿದೆ. ಈ ಹಿನ್ನೆಲೆ ನಿನ್ನೆ ರಾತ್ರಿ 9.30ಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ.
ಕೆಲ ದಿನಗಳ ಹಿಂದೆ ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಯತ್ನಾಳ್ ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಈ ನೋಟಿಸ್ ಗೆ ಯತ್ನಾಳ್ 25 ಪುಟಗಳ ಸುದೀರ್ಘವಾದ ಉತ್ತರ ಸಹ ನೀಡಿದ್ದರು. ಇಂದು ಪ್ರತಿಭಟನೆಯಲ್ಲಿ ಭಾಗಿ ಸರ್ಕಾರದ ವಿರುದ್ಧವೇ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದರು. ಇದೇ ಕಾರಣಕ್ಕಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
PublicNext
22/02/2021 07:36 am