ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯಡಿಯೂರಪ್ಪನವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ

ಬೆಂಗಳೂರು:ಪಂಚಮಸಾಲಿ ಸಮುದಾಯವನ್ನು '2ಎ'ಗೆ ಸೇರಿಸುವ ಬಗ್ಗೆ ನಿರ್ಣಯ ಕೈಗೊಳ್ಳದೇ ಇದ್ದರೆ, ರಾಜ್ಯದ ವೀರಶೈವ ಲಿಂಗಾಯತರು ಯಡಿಯೂರಪ್ಪ ಅವರ ನಾಟಕ ಕಂಪನಿಯನ್ನು ಬಂದ್‌ ಮಾಡಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಎಚ್ಚರಿಕೆ ನೀಡಿದರು.

ಮಾ.4ರಿಂದ ಆರಂಭವಾಗುವ ಅಧಿವೇಶನದಲ್ಲಿ ಮೀಸಲಾತಿ ಬಗ್ಗೆ ಸೂಕ್ತ ನಿರ್ಣಯ ಕೈಗೊಳ್ಳದೇ ಇದ್ದರೆ, ಸಚಿವರಾದ ಸಿ.ಸಿ.ಪಾಟೀಲ್‌ ಮತ್ತು ನಿರಾಣಿ ಅವರು ಕೂಡಲೇ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಪಂಚಮಸಾಲಿಗಳನ್ನು '3ಬಿ' ಪಟ್ಟಿಗೆ ಸೇರಿಸಿದ್ದು ತಾವು ಎಂದು ಯಡಿಯೂರಪ್ಪ ಹೇಳಿಕೊಂಡು ತಿರುಗುತ್ತಿದ್ದಾರೆ. ಆದರೆ, '3ಬಿ' ಮೀಸಲಾತಿಯನ್ನು ಇಡೀ ವೀರಶೈವ ಲಿಂಗಾಯತ ಸಮುದಾಯಕ್ಕೆ ನೀಡಲಾಗಿದೆಯೇ ಹೊರತು ಕೇವಲ ಪಂಚಮಸಾಲಿ ಸಮುದಾಯಕ್ಕಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

Edited By : Nagaraj Tulugeri
PublicNext

PublicNext

22/02/2021 10:32 am

Cinque Terre

77.84 K

Cinque Terre

7

ಸಂಬಂಧಿತ ಸುದ್ದಿ