ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಪಾರ್ಟ್ ಮೆಂಟ್ ಗಳಲ್ಲಿ ಇವಿ ವಾಹನಗಳ ಚಾರ್ಜಿಂಗ್ ಕಡ್ಡಾಯ: ಡಿಸಿಎಂ

ಬೆಂಗಳೂರು: ದುಬಾರಿ ಇಂಧನ ದರ ಮತ್ತು ಹೆಚ್ಚುತ್ತಿರುವ ಮಾಲಿನ್ಯ ಪ್ರಮಾಣವನ್ನು ಪರಿಣಾಮಕಾರಿಯಾಗಿ ತಗ್ಗಿಸುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳಿಗೆ ಜಾರಿಗೆ ತಂದಿದೆ.

ಸದ್ಯ ವಸತಿ ಸಮುಚ್ಛಯಗಳು ಸೇರಿದಂತೆ ದೊಡ್ಡ ದೊಡ್ಡ ಕಟ್ಟಡಗಳು ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯನ್ನು ಕಡ್ಡಾಯವಾಗಿ ಹೊಂದಿರಬೇಕು. ಅದಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲ ಸೋಮವಾರ ಬೆಳಿಗ್ಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಹಾರ್ವರ್ಡ್ ಇಂಡಿಯಾ ಕಾನ್ಫರೆನ್ಸ್ ವತಿಯಿಂದ ಏರ್ಪಡಿಸಲಾಗಿದ್ದ 'ಭವಿಷ್ಯದತ್ತ ಸುಸ್ಥಿರ ಸಾರಿಗೆ' ವರ್ಚುಯಲ್ ಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಎಲೆಕ್ಟ್ರಿಕ್ ವಾಹನಗಳನ್ನು ಒದಗಿಸಿದರಷ್ಟೇ ಸಾಲದು. ಎಲ್ಲೆಡೆಯೂ ಸುಲಭವಾಗಿ ಚಾರ್ಜ್ ಮಾಡಿಕೊಳ್ಳುವಂಥ ವ್ಯವಸ್ಥೆ ಇರಲೇಬೇಕು ಎಂದರು.

ಮುಂದಿನ ದಿನಗಳಲ್ಲಿ ಬ್ಯಾಟರಿ ವಾಹನಗಳು ಮಾರುಕಟ್ಟೆಗೆ ಬರಲಿವೆ. ಆಗ ಗ್ರಾಹಕನಿಗೆ ಕಡಿಮೆ ದರದಲ್ಲಿ ವಾಹನವೂ ದೊರೆಯಲಿದೆ. ತನ್ನ ಅನುಕೂಲಕ್ಕೆ ತಕ್ಕಂತೆ ಗ್ರಾಹಕನು ಬ್ಯಾಟರಿಯನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಅವರು ನುಡಿದರು.

ವಾಹನ ಮಾಲಿನ್ಯವನ್ನು ಸಂಪೂರ್ಣ ತೊಡೆದುಹಾಕಲು ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸಲೇಬೇಕು. ಅದಕ್ಕೆ ಬೇಕಾದ ಸಬ್ಸಿಡಿ, ರಿಯಾಯಿತಿ ವಿದ್ಯುತ್ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ದೇಶದಲ್ಲೇ ಮೊತ್ತ ಮೊದಲಿಗೆ ಎಲೆಕ್ಟ್ರಿಕ್ ವಾಹನ ನೀತಿಯನ್ನು ಅನುಷ್ಠಾನಕ್ಕೆ ತಂದಿರುವ ಕರ್ನಾಟಕವು ಹೊಗೆರಹಿತ ವಾಹನಗಳ ಬಳಕೆಗೆ ಹೆಚ್ಚು ಒತ್ತು ನೀಡುತ್ತಿದೆ ಎಂದರು.

Edited By : Nirmala Aralikatti
PublicNext

PublicNext

22/02/2021 02:25 pm

Cinque Terre

41.8 K

Cinque Terre

3

ಸಂಬಂಧಿತ ಸುದ್ದಿ