ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿಂದೂ ವಿರೋಧಿ ಡಿಎಂಕೆ ಸೋಲಿಸಿ ಹಿಂದುತ್ವ ಗೆಲ್ಲಿಸಿ: ತೇಜಸ್ವಿ ಸೂರ್ಯ ಕರೆ

ಚೆನ್ನೈ: ಡಿಎಂಕೆಯನ್ನು ಹಿಂದೂ ವಿರೋಧಿ ಎಂದು ಕರೆದಿರುವ ಬಿಜೆಪಿ ಯುವ ಮೋರ್ಚಾ ಮುಖ್ಯಸ್ಥ ತೇಜಸ್ವಿ ಸೂರ್ಯ ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್‌ ಪಕ್ಷವನ್ನು ಸೋಲಿಸಿ ಎಂದು ಜನರಲ್ಲಿ ಮನವಿ ಮಾಡಿದ್ದಾರೆ.

ತಮಿಳುನಾಡು ವಿಧಾನಸಭೆ 2021ರ ಏಪ್ರಿಲ್‌ ಅಥವಾ ಮೇನಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ರಣಕಣ ಜೋರಾಗಿದೆ. ಹೀಗಾಗಿ ಸೇಲಂನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಡಿಎಂಕೆ ಪಕ್ಷವೂ ಹಿಂದೂ ವಿರೋಧಿಯಾಗಿರುವ ಕೆಟ್ಟ ಸಿದ್ಧಾಂತವನ್ನು ಪ್ರತಿನಿಧಿಸುತ್ತದೆ. ಪ್ರತಿಯೊಬ್ಬ ತಮಿಳಿಗ ಹೆಮ್ಮೆಯ ಹಿಂದೂ. ಇದು ದೇಶದಲ್ಲಿ ಅತಿ ಹೆಚ್ಚು ದೇವಾಲಯಗಳನ್ನು ಹೊಂದಿರುವ ಪವಿತ್ರ ಭೂಮಿ. ತಮಿಳುನಾಡಿನ ಪ್ರತಿ ಇಂಚು ಪವಿತ್ರವಾಗಿದೆ. ಆದರೆ ಇಲ್ಲಿನ ಡಿಎಂಕೆ ಹಿಂದೂ ವಿರೋಧಿಯಾಗಿದೆ. ಆದ್ದರಿಂದ ನಾವು ಡಿಎಂಕೆಯನ್ನು ಸೋಲಿಸಲೇಬೇಕು ಎಂದು ಕರೆ ಕೊಟ್ಟಿದ್ದಾರೆ.

ದೇಶದ ಎಲ್ಲಾ ಪ್ರಾದೇಶಿಕ ಭಾಷೆಗಳನ್ನು ಗೌರವಿಸುವ ಮತ್ತು ಪ್ರೋತ್ಸಾಹಿಸುವ ಏಕೈಕ ಪಕ್ಷ ಎಂದರೆ ಅದು ಬಿಜೆಪಿ. ತಮಿಳು ಉಳಿಯಬೇಕಾದರೆ ಹಿಂದುತ್ವ ಗೆಲ್ಲಬೇಕು. ಕನ್ನಡ ಗೆಲ್ಲಬೇಕಾದರೆ, ಹಿಂದುತ್ವ ಗೆಲ್ಲಬೇಕು ಎಂದು ತೇಜಸ್ವಿ ಹೇಳಿದ್ದಾರೆ.

Edited By : Vijay Kumar
PublicNext

PublicNext

22/02/2021 08:08 pm

Cinque Terre

69.91 K

Cinque Terre

3

ಸಂಬಂಧಿತ ಸುದ್ದಿ