ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುವೆ: ಸಿದ್ದರಾಮಯ್ಯ

ಮಂಗಳೂರು: ಮತ್ತೆ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ 10 ಸಾವಿರ ಕೋಟಿ ರೂ. ಅನುದಾನ ಕೊಡುವೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಮಂಗಳೂರಿನ ಪುರಭವನದಲ್ಲಿ ನಡೆದ ಭಾವೈಕ್ಯತಾ ಸಮಾವೇಶದಲ್ಲಿ ಮಾತನಾಡಿದ ಅವರು, ''ಈ ದೇಶದ ಸಂಪತ್ತಿನಲ್ಲಿ ಮುಸ್ಲಿಮರಿಗೂ ಪಾಲು ಕೊಡಬೇಕು. ಅಲ್ಪಸಂಖ್ಯಾತರಿಗೆ ಮೂರು ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ನೀಡಿದ್ದೇನೆ. ಮತ್ತೆ ಅಧಿಕಾರಕ್ಕೆ ಬಂದರೆ ಹತ್ತು ಸಾವಿರ ಕೋಟಿ ರೂಪಾಯಿ ನೀಡುತ್ತೇನೆ. ಆದರೆ ಸಂವಿಧಾನ ವಿರೋಧಿ ಬಿಜೆಪಿಯವರು ಅಲ್ಪಸಂಖ್ಯಾತರಿಗೆ ಇದ್ದ ಅನುದಾನದಲ್ಲೂ ಕಡಿಮೆ ಮಾಡಿದ್ದಾರೆ. ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಣೆ ಮಾಡುತ್ತಿಲ್ಲ. ಸಂವಿಧಾನದ ಬದಲಾವಣೆ ಬಗ್ಗೆ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ. ಅವನು ಗ್ರಾಮ ಪಂಚಾಯತಿ ಸದಸ್ಯನಾಗೋಕ್ಕು ನಾಲಾಯಕ್'' ಎಂದು ವಾಗ್ದಾಳಿ ನಡೆಸಿದರು.

Edited By : Vijay Kumar
PublicNext

PublicNext

22/02/2021 08:26 pm

Cinque Terre

119.77 K

Cinque Terre

107

ಸಂಬಂಧಿತ ಸುದ್ದಿ