ಬೆಂಗಳೂರು: ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಫೆ.9ರಂದು ಬಸವರಾಜ ಹೊರಟ್ಟಿ ಅವರು ಸಭಾಪತಿಯಾಗಿ ಆಯ್ಕೆಯಾಗಿದ್ದರು. ಸಭಾಪತಿಯಾಗಿ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಸಭಾಪತಿಗಳು ಪಕ್ಷಾತೀತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಹಾಗಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟು ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡಗೆ ಹೊರಟ್ಟಿ ಕಳುಹಿಸಿದ್ದಾರೆ.
PublicNext
23/02/2021 01:17 pm